More

    ಯಕ್ಷಗಾನ ಕಲಾಕೇಂದ್ರದ ಪ್ರಯತ್ನ ಶ್ಲಾಘನಾರ್ಹ

    ವಿಜಯವಾಣಿ ಸುದ್ದಿಜಾಲ ಕೋಟ

    ಕಂಪ್ಯೂಟರ್ ಯುಗದಲ್ಲಿ ಮಕ್ಕಳಿಗೆ ಸಾಂಸ್ಕೃತಿಕ ಲೋಕದ ಬಗ್ಗೆ ಆಸಕ್ತಿ ಮತ್ತು ಯಕ್ಷಗಾನದ ಉಪಯುಕ್ತತೆಯನ್ನು ಪರಿಚಯಿಸುವ ನಿಟ್ಟಿನಲ್ಲಿ 13 ವರ್ಷಗಳಿಂದ ಯಕ್ಷಗಾನ ಕಲಾಕೇಂದ್ರದ ಪ್ರಯತ್ನ ಶ್ಲಾಘನೀಯ. ಯಕ್ಷಗಾನ ಕಲಿಕೆಯಿಂದ ವಿದ್ಯಾಭ್ಯಾಸದಲ್ಲೂ ಉನ್ನತಿ ಪಡೆಯುವುದರ ಜತೆಗೆ ಸಂಸ್ಕಾರಯುತ ಸಮಾಜ ನಿರ್ಮಾಣ ಸಾಧ್ಯ ಎಂದು ಉದ್ಯಮಿ ಕೆ.ಆರ್.ನಾಕ್ ಹೇಳಿದರು.

    ಹಂಗಾರಕಟ್ಟೆ ಐರೋಡಿ ಯಕ್ಷಗಾನ ಕಲಾಕೇಂದ್ರ ಸಂಸ್ಥೆ ಗುರುವಾರ ಏರ್ಪಡಿಸಿದ್ದ ‘ನಲಿ ಕುಣಿ’ ಯಕ್ಷಗಾನ ಅಭಿನಯ ಮತ್ತು ತರಬೇತಿ ಶಿಬಿರದಲ್ಲಿ ಮಾತನಾಡಿದರು. ಬಿಎಸ್ಸೆಎನ್ನೆಲ್ ನಿವೃತ್ತ ಸಹಾಯಕ ಮಹಾಪ್ರಬಂಧಕ ಸತ್ಯನಾರಾಯಣ ಪುರಾಣಿಕ್ ಶುಭ ಹಾರೈಸಿದರು. ಕಲಾಕೇಂದ್ರದ ಅಧ್ಯಕ್ಷ ಆನಂದ ಸಿ.ಕುಂದರ್ ಸಭಾಧ್ಯಕ್ಷತೆ ವಹಿಸಿದ್ದರು. ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷ ಅನಂತಪದ್ಮನಾಭ ಐತಾಳ, ಶಿಬಿರದ ಪ್ರಾಚಾರ್ಯ ಸದಾನಂದ ಐತಾಳ ಉಪಸ್ಥಿತರಿದ್ದರು.

    ಕಾರ್ಯದರ್ಶಿ ರಾಜಶೇಖರ ಹೆಬ್ಬಾರ ಪ್ರಸ್ತಾವನೆಗೈದು ಸ್ವಾಗತಿಸಿದರು. ಬಸ್ರೂರು ಪ್ರಭಾಕರ ಐತಾಳ್ ವಂದಿಸಿದರು. ರಾಮಚಂದ್ರ ಐತಾಳ ಕಾರ್ಯಕ್ರಮ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts