More

    ಬೂಸ್ಟರ್ ಡೋಸ್ ಪಡೆದು ಆರೋಗ್ಯ ಕಾಪಾಡಿಕೊಳ್ಳಿ: ಸಚಿವ ಹಾಲಪ್ಪ ಆಚಾರ್ ಸಲಹೆ

    ಯಲಬುರ್ಗಾ: ಕೋವಿಡ್ ಮುಕ್ತ ರಾಷ್ಟ್ರ ನಿರ್ಮಾಣ ಮಾಡುವಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದ್ದು, ಮುಂಜಾಗ್ರತಾ ಕ್ರಮವಾಗಿ ಲಸಿಕೆ ಪಡೆದುಕೊಳ್ಳಬೇಕೆಂದು ಸಚಿವ ಹಾಲಪ್ಪ ಆಚಾರ್ ಹೇಳಿದರು. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ 19 ಮುನ್ನೆಚ್ಚರಿಕಾ ಡೋಸ್ ವಿತರಣೆ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು. ಕರೊನಾ ವೇಳೆ ದೇಶದ ಪ್ರತಿಯೊಬ್ಬರ ಆರೋಗ್ಯ ಕಾಪಾಡುವಲ್ಲಿ ಮೋದಿ ಶ್ರಮಿಸಿದ್ದಾರೆ. ಹಳ್ಳಿ ಹಳ್ಳಿಗೂ ಲಸಿಕೆ ಪೂರೈಸುವ ಮೂಲಕ ಜನರ ಜೀವ ಉಳಿಸುವಲ್ಲಿ ಕೇಂದ್ರ ಸರ್ಕಾರ ಪ್ರಯತ್ನಿಸಿದೆ. ಹೀಗಾಗಿ 18 ರಿಂದ 59 ವರ್ಷದವರು ಉಚಿತ ಬೂಸ್ಟರ್ ಡೋಸ್ ಪಡೆದು ಆರೋಗ್ಯ ಕಾಪಾಡಿಕೊಳ್ಳಲು ಮುಂದಾಗಬೇಕು ಎಂದರು. ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್, ಪಪಂ ಅಧ್ಯಕ್ಷ ಅಮರೇಶ ಹುಬ್ಬಳ್ಳಿ, ಸ್ಥಾಯಿ ಸಮಿತಿ ಅಧ್ಯಕ್ಷ ಕಳಕಪ್ಪ ತಳವಾರ್, ಟಿಎಚ್‌ಒ ಸುನೀಲ್ ಚಿತ್ರಗಾರ್, ವೈದ್ಯಾಧಿಕಾರಿ ಸಂಗನಬಸಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts