More

    ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ಪಪಂ ಸದಸ್ಯೆ ವಿಜಯಲಕ್ಷ್ಮೀ ಬೇಲೇರಿ ಸಲಹೆ

    ಯಲಬುರ್ಗಾ: ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದರ ಜತೆಗೆೆ ಆರೋಗ್ಯದ ಬಗ್ಗೆ ಕಾಳಜಿ ತೋರಬೇಕು ಎಂದು ಪಪಂ ಸದಸ್ಯೆ ವಿಜಯಲಕ್ಷ್ಮೀ ಬೇಲೇರಿ ಹೇಳಿದರು.

    ಪಟ್ಟಣದ 12ನೇ ಅಂಗನವಾಡಿ ಕೇಂದ್ರದಲ್ಲಿ ಶಿಶು ಅಭಿವೃದ್ಧಿ ಇಲಾಖೆಯಿಂದ ಶನಿವಾರ ಆಯೋಜಿಸಲಾಗಿದ್ದ ಮೂರು ವರ್ಷ ಮೇಲ್ಪಟ್ಟ ಮಕ್ಕಳಿಗೆ ಪೌಷ್ಟಿಕ ಆಹಾರದ ಪ್ರಾತ್ಯಕ್ಷಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಮಕ್ಕಳಲ್ಲಿ ಅಪೌಷ್ಟಿಕತೆ ತಡೆಗಟ್ಟಲು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ಅಧಿಕಾರಿಗಳು ಸಮರ್ಪಕವಾಗಿ ತಲುಪಿಸಬೇಕು ಎಂದರು.

    ಸಿಡಿಪಿಒ ವಿರೂಪಾಕ್ಷಯ್ಯ ಹಿರೇಮಠ ಮಾತನಾಡಿ, ಮಕ್ಕಳಲ್ಲಿನ ಅಪೌಷ್ಟಿಕತೆ ತಡೆಯಲು ರಾಜ್ಯ ಸರ್ಕಾರ ಪುಷ್ಠಿ ಆಹಾರ ಯೋಜನೆ ಜಾರಿಗೆ ತಂದಿದೆ. ಮೂರು ವರ್ಷ ಮೇಲ್ಪಟ್ಟ ಮಕ್ಕಳ ದೈಹಿಕ ಬೆಳವಣಿಗೆಗೆ ಅಕ್ಕಿ ಪಾಯಸ, ರಾಗಿ ಪೌಡರ್ ತಯಾರಿಸಿ ನೀಡಬೇಕು ಎಂದರು. ಅಂಗನವಾಡಿ ಮೇಲ್ವಿಚಾರಕಿ ಲಲಿತಾ ನಾಯಕ್, ಕಾರ್ಯಕರ್ತೆ ನಾಗರತ್ನ ಸಂಗನಾಳ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts