More

    ಸುರಕ್ಷಾ ಕಿಟ್ ಧರಿಸಿ ಕೆಲಸ ನಿರ್ವಹಿಸಿ: ಪೌರ ಕಾರ್ಮಿಕರಿಗೆ ಪಪಂ ಅಧ್ಯಕ್ಷ ಅಮರೇಶ ಹುಬ್ಬಳ್ಳಿ ಸಲಹೆ

    ಯಲಬುರ್ಗಾ: ಪಟ್ಟಣದ ಸ್ವಚ್ಛತೆ ಕಾಪಾಡುವ ಪೌರ ಕಾರ್ಮಿಕರ ನಿಸ್ವಾರ್ಥ ಸೇವೆಯನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಪಪಂ ಅಧ್ಯಕ್ಷ ಅಮರೇಶ ಹುಬ್ಬಳ್ಳಿ ಹೇಳಿದರು.

    ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ರಾಜ್ಯ ಪೌರ ಸೇವಾ ನೌಕರರ ಸಂಘದ ತಾಲೂಕು ಘಟಕ ಶುಕ್ರವಾರ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಾಜ್ಯದ ಪಟ್ಟಣ ಮತ್ತು ನಗರ ಪ್ರದೇಶಗಳಲ್ಲಿ ಸ್ವಚ್ಛತಾ ಸೇವೆ ಸಲ್ಲಿಸುವ ಪೌರ ಕಾರ್ಮಿಕರನ್ನು ಕಾಯಂಗೊಳಿಸಲು ಸರ್ಕಾರ ಮುಂದಾಗಿರುವುದು ಶ್ಲಾಘನೀಯ. ಕಾರ್ಮಿಕರು ಆರೋಗ್ಯದ ಕಡೆಗೆ ಗಮನಹರಿಸುವ ಜತೆಗೆ ದುಶ್ಚಟಗಳಿಂದ ದೂರವಿರಬೇಕು. ಪೌರ ನೌಕರರ ಅಭಿವೃದ್ಧಿಗಾಗಿ ಸರ್ಕಾರ ಹಲವು ಯೋಜನೆ ಜಾರಿಗೊಳಿಸಿದ್ದು, ಸದ್ಬಳಕೆ ಮಾಡಿಕೊಳ್ಳಬೇಕು. ಸುರಕ್ಷಾ ಕಿಟ್ ಧರಿಸಿ ಸ್ವಚ್ಛತೆ ಕೈಗೊಳ್ಳಬೇಕು ಎಂದರು.

    ಪಪಂ ಸದಸ್ಯರಾದ ನಂದಿತಾ ದಾನರಡ್ಡಿ, ರೇವಣಪ್ಪ ಹಿರೇಕುರುಬರ ಮಾತನಾಡಿ, ಜನರ ಆರೋಗ್ಯ ಕಾಪಾಡುವಲ್ಲಿ ಪೌರ ಕಾರ್ಮಿಕರ ಶ್ರಮ ಸಾಕಷ್ಟಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ವಿದ್ಯಾವಂತರನ್ನಾಗಿ ಮಾಡಬೇಕು ಎಂದರು.

    ಪೌರ ಸೇವಾ ನೌಕರರ ಸಂಘದ ಸ್ಥಳೀಯ ಅಧ್ಯಕ್ಷ ರಮೇಶ ಬೇಲೇರಿ ಮಾತನಾಡಿದರು. ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರೀಡೆಯಲ್ಲಿ ವಿಜೇತರು ಮತ್ತು ಉತ್ತಮ ಸೇವೆಗೈದ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಪಪಂ ಉಪಾಧ್ಯಕ್ಷೆ ಶಾಂತಾ ಮಾಟೂರು, ಸ್ಥಾಯಿ ಸಮಿತಿ ಅಧ್ಯಕ್ಷ ಕಳಕಪ್ಪ ತಳವಾರ, ಸದಸ್ಯರಾದ ವಸಂತ ಬಾವಿಮನಿ, ಬಸಲಿಂಗಪ್ಪ ಕೊತ್ತಲ, ಹನುಮಂತ ಭಜಂತ್ರಿ, ರಿಯಾಜ್ ಅಹ್ಮದ್‌ಖಾಜಿ, ಇಂಜಿನಿಯರ್ ಉಮೇಶ ಬೇಲಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts