More

  ಕಾನೂನಿನ ಜ್ಞಾನ ಪಡಿಯಿರಿ

  ಯಲಬುರ್ಗಾ: ಸಂವಿಧಾನದದಲ್ಲಿ ಪ್ರತಿಯೊಬ್ಬರಿಗೂ ಸಮನಾಗಿ ಸಾಮಾಜಿಕ, ರಾಜಕೀಯ ಹಾಗೂ ಶೈಕ್ಷಣಿಕ ನ್ಯಾಯ ನೀಡಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯಕುಮಾರ ಕನ್ನೂರ ಹೇಳಿದರು.

  ಪಟ್ಟಣದ ತಾಪಂ ಸಭಾಂಗಣದಲ್ಲಿ ತಾಲೂಕಾಡಳಿತ, ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದರು.

  ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಅವಶ್ಯವಾಗಿದೆ. ದೇಶದ ಒಳಗೆ ಶಾಂತಿಯುತ, ಸಮೃದ್ಧ, ಸಹಬಾಳ್ವೆಗೆ ಆಧಾರವಾಗಿರುವ ತತ್ವವಾಗಿದೆ. ಜಾತಿ, ವರ್ಣ, ಧರ್ಮಗಳ ತಾರತಮ್ಯ ಮಾಡದೇ ಸಮ ಸಮಾಜ ನಿರ್ಮಾಣ ಮಾಡುವುದು ಸಾಮಾಜಿಕ ನ್ಯಾಯದ ಗುರಿಯಾಗಿದೆ. ಜಗಜ್ಯೋತಿ ಬಸವಣ್ಣ, ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ವಿಶ್ವಕ್ಕೆ ಸಾಮಾಜಿಕ ನ್ಯಾಯ ಪರಿಚಯಿಸಿದ್ದಾರೆ. ಎಲ್ಲರೂ ಕಾನೂನಿನ ಸಾಮಾನ್ಯ ಜ್ಞಾನ ಹೊಂದಬೇಕು ಎಂದರು.

  ತಹಸೀಲ್ದಾರ್ ಬಸವರಾಜ ತೆನ್ನಳ್ಳಿ, ತಾಪಂ ಇಒ ಸಂತೋಷ ಪಾಟೀಲ್, ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕ ವಿ.ಕೆ.ಬಡಿಗೇರ, ಗ್ರೇಡ್-2 ತಹಸೀಲ್ದಾರ್ ನಾಗಪ್ಪ ಸಜ್ಜನ್, ಪಪಂ ಮುಖ್ಯಾಧಿಕಾರಿ ನಾಗೇಶ, ಅಪರ ಸರ್ಕಾರಿ ವಕೀಲ ಮಲ್ಲನಗೌಡ ಪಾಟೀಲ್, ಕೋರ್ಟ್ ಸಿಬ್ಬಂದಿ ರಾಘವೇಂದ್ರ ಕೋಳಿಹಾಳ, ವಿನಾಯಕ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts