More

    ಸರ್ಕಾರಿ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿದ ಶಾಸಕ

    ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಸಲಹೆ

    ಯಲಬುರ್ಗಾ: ಕರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ತಾಲೂಕಿನ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯ ಸೌಲಭ್ಯ ಸಲಕರಣೆ ಸಂಗ್ರಹಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಹಾಲಪ್ಪ ಆಚಾರ್ ಹೇಳಿದರು.

    ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಶನಿವಾರ ದಿಢೀರ್ ಭೇಟಿ ನೀಡಿ ಅಧಿಕಾರಿ ಹಾಗೂ ಸಿಬ್ಬಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದರು. ಕರೊನಾ ಸೋಂಕು ಹರಡದಂತೆ ಮುಂಜಾಗ್ರತೆ ವಹಿಸಬೇಕು. ಸಿಬ್ಬಂದಿ ರಜೆ ಪಡೆಯದೆ ಜನರ ಬೆನ್ನಿಗೆ ರಕ್ಷಾ ಕವಚದಂತೆ ಕೆಲಸ ಮಾಡಿ ಸೋಂಕು ಹರಡದಂತೆ ನಿಗಾ ವಹಿಸಬೇಕು. ಆಸ್ಪತ್ರೆಗೆ ಬರುವ ಎಲ್ಲರಿಗೂ ಕಡ್ಡಾಯ ಮಾಸ್ಕ್ ಅಥವಾ ಕರವಸ್ತ್ರ ಧರಿಸಲು ಸೂಚಿಸಬೇಕು ಎಂದು ವೈದ್ಯರಿಗೆ ತಿಳಿಸಿದರು.


    ವಿವಿಧೆಡೆ ಭೇಟಿ: ತಾಲೂಕಿನ ಹಿರೇವಂಕಲಕುಂಟಾ, ಮಂಗಳೂರು ಸಮುದಾಯ ಆರೋಗ್ಯ ಕೇಂದ್ರ, ವಜ್ರಬಂಡಿ, ಬೇವೂರು, ಗಾಣದಾಳ, ಗುನ್ನಾಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ವೈದ್ಯರಿಗೆ ಕರೊನಾ ಬಗ್ಗೆ ಹೆಚ್ಚು ಮನವರಿಕೆ ಮಾಡಿ ಸ್ವಚ್ಛತೆಗೆ ಆದ್ಯತೆ ನೀಡಲು ಸಲಹೆ ನೀಡಿದರು. ಸಾರ್ವಜನಿಕರು ಮನೆಯಿಂದ ಹೊರ ಬಾರದಂತೆ ಮನೆಯಲ್ಲೇ ಇರಬೇಕು ಎಂದರು. ವೈದ್ಯರಾದ ಸಂಗನಬಸಪ್ಪ, ಸ್ವಾತಿ ಹಾಗೂ ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts