More

    ಕ್ರಾಂತಿಕಾರಿ ನಿರ್ಣಯಗಳಿಂದ ದೇಶ ಸುಸ್ಥಿತಿ

    ಯಲಬುರ್ಗಾ: ದೇಶದಲ್ಲಿ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದು ಅಭಿವೃದ್ಧಿಗೆ ಶ್ರಮಿಸುತ್ತಿರುವ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಹೇಳಿದರು.

    ತಾಲೂಕಿನ ಮುಧೋಳ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಗ್ರಾಮ ಚಲೋ ಅಭಿಯಾನ ಅಂಗವಾಗಿ ಮತ್ತೊಮ್ಮೆ ಮೋದಿ ಸರ್ಕಾರ ಎಂಬ ಗೋಡೆ ಬರಹಕ್ಕೆ ಚಾಲನೆ ನೀಡಿ ಮಾತನಾಡಿದರು.

    ವಿಕಸಿತ ಭಾರತಕ್ಕಾಗಿ ದೇಶದಾದ್ಯಂತ ಮೂರು ದಿನಗಳ ಕಾಲ ಗ್ರಾಮ ಚಲೋ ಅಭಿಯಾನ ನಡೆಯುತ್ತಿದೆ. ಕೇಂದ್ರ ಸರ್ಕಾರದ ಅವಧಿಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು, ಜನಪರ ಯೋಜನೆಗಳು, ಐತಿಹಾಸಿಕ ಸಾಧನೆಗಳು ಮತ್ತು ಜನಕಲ್ಯಾಣ ಕಾರ್ಯಕ್ರಮಗಳು ಸಾಕಷ್ಟಾಗಿವೆ. ಇಡೀ ವಿಶ್ವವೇ ತಿರುಗಿ ನೋಡುವಂತ ಅಭಿವೃದ್ಧಿಯನ್ನು ನರೇಂದ್ರ ಮೋದಿಯವರು ಮಾಡಿದ್ದಾರೆ.

    ಜನಹಿತ, ಅಭಿವೃದ್ಧಿ, ಕ್ರಾಂತಿಕಾರಿ ನಿರ್ಣಯಗಳನ್ನು ಕೈಗೊಂಡು ದೇಶವನ್ನು ಸುಸ್ಥಿತಿಯಲ್ಲಿಡಲಾಗಿದೆ. ಈ ಹಿನ್ನೆಲೆಯಲ್ಲಿ ಮೋದಿ ಮತ್ತೊಮ್ಮೆ ಎನ್ನುವ ಸಂಕಲ್ಪ ಮಾಡಲಾಗಿದ್ದು, ಕಾರ್ಯಕರ್ತರು ನಮ್ಮ ಸರ್ಕಾರದ ಅವಧಿಯಲ್ಲಾದ ಜನಪರ ಕಾರ್ಯಕ್ರಮಗಳನ್ನು ಮನೆ ಮನೆಗೆ ತೆರಳಿ ಮನವರಿಕೆ ಮಾಡುವ ಕೆಲಸವಾಗಬೇಕು. ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಎಲ್ಲರೂ ಶ್ರಮಿಸಬೇಕು ಎಂದರು.

    ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರತನ್ ದೇಸಾಯಿ, ತಾಪಂ ಮಾಜಿ ಸದಸ್ಯ ಶರಣಪ್ಪ ಈಳಿಗೇರ, ತಾಲೂಕು ವಕ್ತಾರ ವೀರಣ್ಣ ಹುಬ್ಬಳ್ಳಿ, ತಾಲೂಕು ಪ್ರಧಾನ ಕಾರ್ಯದರ್ಶಿ ಮಾರುತಿ ಗಾವರಾಳ, ಬೂತ್ ಸಮಿತಿ ಅಧ್ಯಕ್ಷ ವಿರೂಪಾಕ್ಷಪ್ಪ ಮೆಣಸಿನಕಾಯಿ, ಪಕ್ಷದ ಕಾರ್ಯಕರ್ತರು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts