More

    ನಿಲ್ಲದ ಜಿಟಿಜಿಟಿ ಮಳೆ; ಸೋರುತ್ತಿದೆ ಹೊಸಳ್ಳಿ ಸರ್ಕಾರಿ ಶಾಲೆಯ ಕೊಠಡಿಗಳು

    ಯಲಬುರ್ಗಾ: ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ಹೊಸಳ್ಳಿ ಗ್ರಾಮದ ಸರ್ಕಾರಿ ಹಿಪ್ರಾ ಶಾಲೆ ಕಟ್ಟಡ ಸೋರುತ್ತಿದ್ದು, ಮಕ್ಕಳ ಕಲಿಕೆಗೆ ತೊಂದರೆಯಾಗಿದೆ.

    ಶಾಲೆಯ ಎರಡು ಕೊಠಡಿಗಳ ಮೇಲೆ ನೀರು ಸಂಗ್ರಹಗೊಂಡು, ಶಿಥಿಲಾವಸ್ಥೆಗೆ ತಲುಪಿದೆ. ಶಿಕ್ಷಕರೇ ಮಳೆ ನೀರನ್ನು ಹೊರಗೆ ಚೆಲ್ಲಬೇಕಾದ ಪರಿಸ್ಥಿತಿ ಎದುರಾಗಿದೆ. ಬೇರೆ ಕೊಠಡಿಯಲ್ಲಿ ಮಕ್ಕಳಿಗೆ ಪಾಠ ಕೇಳಲು ವ್ಯವಸ್ಥೆ ಮಾಡಿದ್ದಾರೆ. ಸೋರುತ್ತಿರುವ ಕಟ್ಟಡ ದುರಸ್ತಿ ಮಾಡುವಂತೆ ಶಾಲಾ ಶಿಕ್ಷಕರು, ಗ್ರಾಮಸ್ಥರು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗಿಲ್ಲ. ಇನ್ನಾದರೂ ಸಂಬಂಧಿಸಿದ ಜನಪ್ರತಿನಿಧಿನಗಳು, ಅಧಿಕಾರಿಗಳು ಗಮನಹರಿಸಬೇಕು. ಮಕ್ಕಳ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

    ಮಳೆಗಾಲದಲ್ಲಿ ಎರಡು ಶಾಲಾ ಕೊಠಡಿಗಳು ಸೋರುತ್ತಿರುವುದರಿಂದ ಮಕ್ಕಳ ಕಲಿಕೆಗೆ ಸಮಸ್ಯೆಯಾಗಿದೆ. ಈ ಕುರಿತು ಗ್ರಾಪಂ ಪಿಡಿಒ ಗಮನಕ್ಕೆ ತಂದಿದ್ದು, ಭೇಟಿ ನೀಡಿ ಪರಿಶೀಲಿಸಿದ್ದಾರೆ. ದುರಸ್ತಿ ಕುರಿತು ಮೇಲಧಿಕಾರಿಗಳ ಗಮನಕ್ಕೆ ತರುವ ಭರವಸೆ ನೀಡಿದ್ದಾರೆ.
    | ಅಖಂಡಪ್ಪ ಮಾಯಾಚಾರಿ, ಮುಖ್ಯಶಿಕ್ಷಕ, ಸಹಿಪ್ರಾ ಶಾಲೆ, ಹೊಸಳ್ಳಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts