More

    ಆಲಿಕಲ್ಲು ಮಳೆಗೆ ತೋಟಗಾರಿಕೆ ಬೆಳೆ ಹಾನಿ

    ಯಲಬುರ್ಗಾ: ತಾಲೂಕಿನ ವಿವಿಧೆಡೆ ಶುಕ್ರವಾರ ಆಲಿಕಲ್ಲು ಮಳೆಯಿಂದಾಗಿ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಕರೊನಾ ಕರ್ಫ್ಯೂದಿಂದಾಗಿ ನಷ್ಟ ಅನುಭವಿಸುತ್ತಿರುವ ರೈತರಿಗೆ ಮತ್ತಷ್ಟು ಹಾನಿ ಸಂಭವಿಸಿದೆ.

    ಯಲಬುರ್ಗಾ ಹಾಗೂ ಕುಕನೂರು ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಆಲಿಕಲ್ಲು ಮಳೆಯಿಂದ 25 ಹೆಕ್ಟೇರ್ ಮಾವು, ಎಂಟು ಹೆಕ್ಟೇರ್ ಬಾಳೆ, ತಲಾ ಎರಡು ಹೆಕ್ಟೇರ್ ನುಗ್ಗೆ ಮತ್ತು ತರಕಾರಿ ನಾಶವಾಗಿದೆ. ಕರೊನಾ ಕರ್ಫ್ಯೂದಿಂದಾಗಿ ತೋಟಗಾರಿಕೆ ಫಸಲನ್ನು ಮಾರುಕಟ್ಟೆಗೆ ಸಾಗಿಸಲು ಸಮಸ್ಯೆಯಾಗಿದೆ. ಇದೀಗ ಮಳೆಯಿಂದ ಫಸಲು ಹಾನಿಯಾಗುತ್ತಿರುವುದು ರೈತರನ್ನು ಆತಂಕಕ್ಕೆ ದೂಡಿದೆ.

    ಶುಕ್ರವಾರ ಆಲಿಕಲ್ಲು ಮಳೆಯಿಂದ ಹಾನಿಯಾದ ಮಾವಿನ ತೋಟಕ್ಕೆ ಹಿರೇವಂಕಲಕುಂಟಾ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿ ಪರಶುರಾಮ ಭೇಟಿ ಪರಿಶೀಲಿಸಿದರು.

    ಆಲಿಕಲ್ಲು ಮಳೆಯಿಂದ ಬೆಳೆ ಹಾನಿಯಾದ ಜಮೀನಿಗೆ ಭೇಟಿ ನೀಡಿ ವರದಿ ತಯಾರಿಸಲಾಗಿದೆ. ರೈತರಿಗೆ ಸರ್ಕಾರದಿಂದ ಪರಿಹಾರ ಕೊಡಿಸುವ ವ್ಯವಸ್ಥೆ ಮಾಡಲಾಗುವುದು.
    | ಮಂಜುನಾಥ ಲಿಂಗಣ್ಣವರ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಯಲಬುರ್ಗಾ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts