More

    ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ

    ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಇಡಿ ಸೂಚನೆ ಗದಗ-ಕೊಪ್ಪಳ ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆ

    ಯಲಬುರ್ಗಾ: ಮಕ್ಕಳಿಗೆ ಪರಿಣಾಮಕಾರಿ ಬೋಧನೆ ಮಾಡುವ ಮೂಲಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಪ್ರಾಚಾರ್ಯರು ಹಾಗೂ ಮೇಲ್ವಿಚಾರಕರು ಹೆಚ್ಚಿನ ಗಮನಹರಿಸಬೇಕೆಂದು ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ರಮೇಶ ದೇಸಾಯಿ ಹೇಳಿದರು.

    ತಾಲೂಕಿನ ಹೀರೆವಂಕಲಕುಂಟಾ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗದಗ-ಕೊಪ್ಪಳ ಜಿಲ್ಲೆಗಳ ವಸತಿ ಶಾಲೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ವಸತಿ ಶಾಲೆಗಳಲ್ಲಿ ಶುದ್ಧ ಕುಡಿವ ನೀರು, ಆಹಾರ ಗುಣಮಟ್ಟ ಹಾಗೂ ಸ್ವಚ್ಛತೆ ಕಾಪಾಡಬೇಕು. ಶಿಕ್ಷಕರ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದರು.

    ಮೆನು ಪ್ರಕಾರ ಉಪಹಾರ ನೀಡುತ್ತಾರೆಯೇ ? ಶಿಕ್ಷಕರ ಕೊರತೆ ಇದೆಯೇ? ಶಿಕ್ಷಕರು ಸರಿಯಾಗಿ ಬೋಧನೆ ಮಾಡುತ್ತಾರೆಯೇ ಎಂದು ರಮೇಶ ದೇಸಾಯಿ ವಿದಾರ್ಥಿಗಳಿಂದ ಮಾಹಿತಿ ಪಡೆದರು. ಶಾಲೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಮಕ್ಕಳು ಉತ್ತರಿಸಿದರು. ವಸತಿ ನಿಲಯದ ವಾತಾವರಣ ಹಾಗೂ ಸ್ವಚ್ಛತೆ ಕುರಿತು ಕಾರ್ಯನಿರ್ವಾಹಕ ನಿರ್ದೇಶಕ ಮೆಚ್ಚುಗೆ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts