More

    ನೀರಾವರಿ ಕಾಮಗಾರಿ ತ್ವರಿತ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಚಿವ ಹಾಲಪ್ಪ ಆಚಾರ್ ಸೂಚನೆ

    ಯಲಬುರ್ಗಾ: ಕೃಷ್ಣಾ ಬಿಸ್ಕೀಂ ನೀರಾವರಿ ಯೋಜನೆಯಡಿ ಕ್ಷೇತ್ರದ ಕೆರೆಗಳಿಗೆ ನೀರು ಹರಿಸಬೇಕಿದ್ದು, ಇಲಾಖೆ ಅಧಿಕಾರಿಗಳು ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಮುಂದಾಗಬೇಕು ಎಂದು ಸಚಿವ ಹಾಲಪ್ಪ ಆಚಾರ್ ಸೂಚಿಸಿದರು.

    ಹಿರೇವಂಕಲಕುಂಟಾದ ಪ್ರವಾಸಿ ಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕೊಪ್ಪಳ ಏತ ನೀರಾವರಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೂರ‌್ನಾಲ್ಕು ತಿಂಗಳ ಒಳಗಾಗಿ ತಾಲೂಕಿನ ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಉದ್ದೇಶವಿದ್ದು, ಜನ ಜಾನುವಾರುಗಳಿಗೆ ಅನುಕೂಲ ಕಲ್ಪಿಸುವ ಸಂಕಲ್ಪ ತೊಡಲಾಗಿದೆ. ಆದ್ದರಿಂದ ವಿಳಂಬ ಮಾಡದೆ ಯೋಜನೆಯ ಕಾಮಗಾರಿ ಬೇಗ ಮುಗಿಸಬೇಕು. ಜಿಲ್ಲೆಯ ರೈತರ ಬದುಕು ಹಸನಾಗಿಸುವ ಹಿತದೃಷ್ಟಿಯಿಂದ ಅಧಿಕಾರಿಗಳು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು ಎಂದರು.

    ಯೋಜನೆಯ ನೀಲಿನಕ್ಷೆಯನ್ನು ಸಚಿವ ಹಾಲಪ್ಪ ಆಚಾರ್ ಪರಿಶೀಲಿಸಿದರು. ಸಂಸದ ಸಂಗಣ್ಣ ಕರಡಿ, ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ, ಬೃಹತ್ ನೀರಾವರಿ ಇಲಾಖೆ ಮುಖ್ಯ ಇಂಜಿನಿಯರ್ ಅಶೋಕ ವಾಸಂದ, ಇಇ ತಂಬಿದೊರೈ, ಎಇ ಮುರಳಿ ಮೋಹನ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts