More

    ಕಾನೂನಿನ ಸಾಮಾನ್ಯ ಜ್ಞಾನ ಅವಶ್ಯ- ಸಹಾಯಕ ಸರ್ಕಾರಿ ಅಭಿಯೋಜಕ ಎ.ಐ.ಹಾದಿಮನಿ ಹೇಳಿಕೆ

    ಯಲಬುರ್ಗಾ: ಅಂಗವಿಕಲರು ದೇಶದ ಆಸ್ತಿ. ಅವರನ್ನು ಪ್ರತಿಯೊಬ್ಬರೂ ಸಮಾನತೆಯಿಂದ ಕಾಣಬೇಕು ಎಂದು ಸಹಾಯಕ ಸರ್ಕಾರಿ ಅಭಿಯೋಜಕ ಎ.ಐ.ಹಾದಿಮನಿ ಹೇಳಿದರು.

    ಪಟ್ಟಣದ ಕಂದಾಯ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕು ಆಡಳಿತ, ತಾಪಂ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಶ್ವ ಅಂಗವಿಕಲರ ದಿನದ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅಂಗವಿಕಲರನ್ನು ತಾರತಮ್ಯ ಭಾವನೆಯಿಂದ ಕಾಣದೇ, ಅವರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಎಲ್ಲರಿಗೂ ಕಾನೂನಿನ ಸಾಮಾನ್ಯ ಜ್ಞಾನ ಅವಶ್ಯವಿದೆ ಎಂದರು.

    ತಹಸೀಲ್ದಾರ್ ಶ್ರೀಶೈಲ ತಳವಾರ್ ಮಾತನಾಡಿ, ಅಂಗವಿಕಲರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆ ಜಾರಿಗೊಳಿಸಿದ್ದು, ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ತಾಪಂ ಇಒ ಸಂತೋಷ ಪಾಟೀಲ್ ಮಾತನಾಡಿದರು.

    ಸಾರಿಗೆ ಘಟಕ ವ್ಯವಸ್ಥಾಪಕ ರಮೇಶ ಚಿಣಗಿ, ವೈದ್ಯ ಚನ್ನಬಸಪ್ಪ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ವಿ.ಕೆ.ಬಡಿಗೇರ್, ಗಣ್ಯರಾದ ಈರಪ್ಪ ಕರೆಕುರಿ, ಬಸನಗೌಡ ಬನ್ನಪ್ಪಗೌಡ್ರ, ಶರಣಪ್ಪ ಗಾಳಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts