More

    ಮದುವೆಗಳು ಆಡಂಬರದ ಸಂಕೇತವಾಗದಿರಲಿ- ಕರಿಬಸವೇಶ್ವರ ಸ್ವಾಮೀಜಿ ಸಲಹೆ

    ಯಲಬುರ್ಗಾ: ಪುರಾಣ, ಪ್ರವಚನ ಆಲಿಸುವುದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಕುಷ್ಟಗಿಯ ಮದ್ದಾನಿ ಹಿರೇಮಠದ ಶ್ರೀ ಕರಿಬಸವೇಶ್ವರ ಸ್ವಾಮೀಜಿ ಹೇಳಿದರು.

    ತಾಲೂಕಿನ ಹಿರೇವಂಕಲಕುಂಟಾ ಗ್ರಾಮದಲ್ಲಿ ಸೋಮವಾರ ಶ್ರೀಶರಣಬಸವೇಶ್ವರ ಪುರಾಣ ಮಹಾಮಂಗಲ, ಕುಂಭಮೇಳ ಮತ್ತು ಸಾಮೂಹಿಕ ವಿವಾಹ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಸಾರ್ವಜನಿಕರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚು ಭಾಗವಹಿಸಬೇಕು. ಪ್ರತಿಯೊಬ್ಬರೂ ಭಕ್ತಿ, ಭಾವದಿಂದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದರಿಂದ ಮನಸು ಪ್ರಫುಲ್ಲವಾಗುತ್ತದೆ. ಮಕ್ಕಳಿಗೆ ಒಳ್ಳೆಯ ಸಂಸ್ಕೃತಿ ಮತ್ತು ಸಂಸ್ಕಾರ ಕಲಿಸಬೇಕು. ದಾನ, ಧರ್ಮ ಮಾಡುವ ಮನೋಭಾವ ರೂಢಿಸಿಕೊಳ್ಳಬೇಕು. ಮದುವೆಗಳು ಇತ್ತೀಚಿನ ದಿನಗಳಲ್ಲಿ ಆಡಂಬರದ ಸಂಕೇತವಾಗುತ್ತಿವೆ. ಸಾಮೂಹಿಕ ವಿವಾಹಗಳು ಬಡವರಿಗೆ ವರದಾನವಾಗಿವೆ ಎಂದರು.

    16 ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟವು. ಕುಂಭ ಮೆರವಣಿಗೆ ಆಯೋಜಿಸಲಾಗಿತ್ತು. ಶರಣಬಸವೇಶ್ವರ ಜಾತ್ರೆ ಅಂಗವಾಗಿ ದಾಸೋಹಕ್ಕೆ ವಾಹನ ಚಾಲಕರ ಬಳಗದಿಂದ ಖಾದ್ಯ ವಿತರಿಸಲಾಯಿತು. ಶ್ರೀಧರಮುರಡಿ ಹಿರೇಮಠದ ಶ್ರೀಬಸವಲಿಂಗೇಶ್ವರ ಸ್ವಾಮೀಜಿ, ಕುಕನೂರಿನ ಅನ್ನದಾನೀಶ್ವರ ಶಾಖಾ ಮಠದ ಡಾ.ಮಹಾದೇವ ದೇವರು, ಅಂಕಲಿಮಠದ ಶ್ರೀ ಬಸವರಾಜ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ದೇವಸ್ಥಾನ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹರ್ಲಾಪುರ, ಪ್ರಮುಖರಾದ ವೆಂಕಟೇಶ ಈಳಿಗೇರ್, ವೀರಪ್ಪ ಮಾಸ್ತರ ಸಜ್ಜನ್, ಬಸವಂತಪ್ಪ ಬಂಗಾರಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts