More

    ಮೀನಾಕ್ಷಿ ನಗರದಲ್ಲಿ ಶಾಲೆ ಆರಂಭಿಸುವಂತೆ ಒತ್ತಾಯಿಸಿ ಶಾಸಕ ಹಾಲಪ್ಪ ಆಚಾರ್‌ಗೆ ಮನವಿ

    ಯಲಬುರ್ಗಾ: ಪಟ್ಟಣದ ಮೀನಾಕ್ಷಿ ನಗರದಲ್ಲಿ ಸರ್ಕಾರಿ ಶಾಲೆ ಆರಂಭಿಸುವಂತೆ ಒತ್ತಾಯಿಸಿ ಶಾಸಕ ಹಾಲಪ್ಪ ಆಚಾರ್‌ಗೆ ಪಪಂ ಅಧ್ಯಕ್ಷ ಅಮರೇಶ ಹುಬ್ಬಳ್ಳಿ, ಸ್ಥಾಯಿ ಸಮಿತಿ ಅಧ್ಯಕ್ಷ ವಸಂತ ಬಾವಿಮನಿ ನೇತೃತ್ವದಲ್ಲಿ ಗುರುವಾರ ಮನವಿ ಸಲ್ಲಿಸಲಾಯಿತು.

    ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ವಸಂತ ಬಾವಿಮನಿ ಮಾತನಾಡಿ, ಮೀನಾಕ್ಷಿ ನಗರದಲ್ಲಿ 400 ಕುಟುಂಬಗಳಿವೆ. ಈ ಪೈಕಿ ಪರಿಶಿಷ್ಟ ಜಾತಿ, ಪಂಗಡ ಹಾಗೂ ಅಲ್ಪಸಂಖ್ಯಾತ ಸಮುದಾಯದವರು ಹೆಚ್ಚಿನ ಪ್ರಮಾಣದಲ್ಲಿದ್ದಾರೆ. ಮೀನಾಕ್ಷಿ ನಗರ ಮಕ್ಕಳು ಶಾಲೆಗಾಗಿ 1.5 ಕಿ.ಮೀ. ದೂರ ಹೋಗಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ ಆರಂಭಿಸಬೇಕೆಂದು ಆಗ್ರಹಿಸಿದರು. ಪಪಂ ಸದಸ್ಯ ಕಳಕಪ್ಪ ತಳವಾರ್, ಮುಖಂಡ ದೊಡ್ಡಯ್ಯ ಗುರುವಿನ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts