More

    ಪಕ್ಷ ಸಂಘಟನೆಗೆ ಕಾರ್ಯಕರ್ತರು ಪ್ರವೃತ್ತರಾಗಲಿ ಎಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

    ಯಲಬುರ್ಗಾ: ಮುಂಬರುವ ವಿಧಾನಸಭಾ ಚುನಾವಣೆಗೆ ಇನ್ನೂ ಒಂದೂವರೆ ವರ್ಷ ಬಾಕಿ ಇದ್ದು, ಕಾರ್ಯಕರ್ತರು ಈಗಿನಿಂದಲೇ ಪಕ್ಷ ಸಂಘಟನೆಗೆ ಕಾರ್ಯ ಪ್ರವೃತ್ತರಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

    ಪಟ್ಟಣದ ಬ್ಲಾಕ್ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ. ಅಧಿಕಾರ ಶಾಶ್ವತವಲ್ಲ. ಬುದ್ಧ, ಬಸವ, ಅಂಬೇಡ್ಕರ್ ಸೇರಿದಂತೆ ಹಲವು ದಾರ್ಶನಿಕರ ಚಿಂತನೆಯಲ್ಲಿ ರಾಜಕೀಯ ಮಾಡಬೇಕು ಹಾಗೂ ಸಮಾಜಮುಖಿಯಾಗಿ ಬೆಳೆಯಬೇಕು. ಪಕ್ಷದ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದರು.

    ಮಾಜಿ ಸಚಿವ ಬಸವರಾಜ ರಾಯರಡ್ಡಿ ಮಾತನಾಡಿ, ಸತೀಶ ಜಾರಕಿಹೊಳಿ ಪ್ರಗತಿಪರ ವಿಚಾರದಾಯಕ ವ್ಯಕ್ತಿತ್ವವುಳ್ಳ ನಾಯಕ. ಶರಣರ ತತ್ವದಲ್ಲಿ ನಂಬಿಕೆ ಇಟ್ಟವರು. ಮೂಢನಂಬಿಕೆ ವಿರುದ್ಧ ಅವರ ಹೋರಾಟ ಶ್ಲಾಘನೀಯ. ವೈಚಾರಿಕತೆ ರೂಢಿಸಿಕೊಂಡ ರಾಜಕಾರಣಿಗಳಲ್ಲಿ ಜಾರಕಿಹೊಳಿ ಒಬ್ಬರಾಗಿದ್ದಾರೆ ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಮಾತನಾಡಿದರು.

    ಸನ್ಮಾನ: ಇದೇ ವೇಳೆ ಬ್ಲಾಕ್ ಕಾಂಗ್ರೆಸ್‌ನ ವಿವಿಧ ಘಟಕಗಳಿಂದ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯನ್ನು ಸನ್ಮಾನಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಿವರಾಜ ತಂಗಡಗಿ, ಪ್ರಮುಖರಾದ ಕೆರಿಬಸಪ್ಪ ನಿಡಗುಂದಿ, ಹನುಮಂತಗೌಡ ಚಂಡೂರು, ರಾಜು ನಾಯಕ, ಎ.ಜಿ.ಬಾವಿಮನಿ, ಗಿರಿಜಾ ರೇವಣಪ್ಪ ಸಂಗಟಿ, ಸಾವಿತ್ರಿ ಗೊಲ್ಲರ್, ಜಯಶ್ರೀ ಅರಕೇರಿ, ಜಯಶ್ರೀ ಕಂದಕೂರ, ಛತ್ರಪ್ಪ ಛಲವಾದಿ, ಮಹಾಂತೇಶ ಗಾಣಿಗೇರ, ಆನಂದ ಉಳ್ಳಾಗಡ್ಡಿ, ಬಸವರಾಜ ಪೂಜಾರ ಸೇರಿದಂತೆ ಮತ್ತಿತರರಿದ್ದರು.ಪಕ್ಷ ಸಂಘಟನೆಗೆ ಕಾರ್ಯಕರ್ತರು ಪ್ರವೃತ್ತರಾಗಲಿ ಎಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts