More

    ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ ಸರ್ಕಾರ: ಮಾಟರಂಗಿಯಲ್ಲಿ ಸಚಿವ ಹಾಲಪ್ಪ ಆಚಾರ್ ಹೇಳಿಕೆ

    ಯಲಬುರ್ಗಾ: ಗ್ರಾಮೀಣ ಪ್ರದೇಶದ ಜನರ ಸಮಸ್ಯೆ ಪರಿಹರಿಸಲು ಬಿಜೆಪಿ ಸರ್ಕಾರ ಅನೇಕ ಕಾರ್ಯಕ್ರಮ ಜಾರಿಗೊಳಿಸಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್ ಹೇಳಿದರು.

    ತಾಲೂಕಿನ ಮಾಟರಂಗಿ ಸರ್ಕಾರಿ ಕಿಪ್ರಾ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾಂಗ್ರೆಸ್ ಸರ್ಕಾರವಿದ್ದಾಗ ಹಳ್ಳಿ ಜನರ ಅಭಿವೃದ್ಧಿಗೆ ಶ್ರಮಿಸದೆ ಸುಳ್ಳು ಭರವಸೆ ನೀಡಿ ಆಡಳಿತ ನಡೆಸಿತು. ಈಗ ಬಿಜೆಪಿ ಸರ್ಕಾರ ಗ್ರಾಮೀಣರ ಬದುಕು ಹಸನಾಗಿಸಲು ಜನಪರ ಯೋಜನೆಗಳ ಮೂಲಕ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಸಿಎಂ ಬೊಮ್ಮಾಯಿ, ಪ್ರಧಾನಿ ಮೋದಿ ಹಲವಾರು ಕಾರ್ಯಕ್ರಮ ಜಾರಿಗೊಳಿಸಿ ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದರು.

    ತಹಸೀಲ್ದಾರ್ ಶ್ರೀಶೈಲ ತಳವಾರ್ ಮಾತನಾಡಿ, ಜನರ ಸಮಸ್ಯೆ ಪರಿಹಾರಕ್ಕಾಗಿ ವಿವಿಧ ಇಲಾಖೆಗಳ ಅಧಿಕಾರಿಗಳು ಗ್ರಾಮಕ್ಕೆ ಬಂದಿದ್ದು, ಸದುಪಯೋಗ ಪಡೆಯಬೇಕು. ಕಂದಾಯ ಇಲಾಖೆಗೆ ಸಂಬಂಧಿಸಿದ ಜಮೀನು ಪೋತಿವಿರಾಸತ್, ಸರ್ವೇ ನಂಬರ್ ಸಮಸ್ಯೆ, ಮಾಸಾಶನ ಸೇರಿದಂತೆ ಇತರ ತೊಂದರೆಗಳನ್ನು ಆದ್ಯತೆ ಮೇರೆಗೆ ಪರಿಹರಿಸಲಾಗುವುದು ಎಂದರು.

    ಸಾರಿಗೆ ಸಮಸ್ಯೆ ನಿವಾರಿಸಿ: ಮಾಟರಂಗಿಯಿಂದ ಹಿರೇಅರಳಿಹಳ್ಳಿಗೆ ತೆರಳುವ ಶಾಲಾ ವಿದ್ಯಾರ್ಥಿಗಳಿಗೆ ಸಾರಿಗೆ ಸಮಸ್ಯೆ ಇದ್ದು, ನಿತ್ಯ ನಡೆದು ಹೋಗಬೇಕಿದೆ. ಆದ್ದರಿಂದ ಈ ಮಾರ್ಗದಲ್ಲಿ ಸಂಚರಿಸುವ ಬಸ್‌ಗಳನ್ನು ಗ್ರಾಮದ ಮೂಲಕ ಹಾದುಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಮನವಿ ಮಾಡಿದರು. ಈ ಕುರಿತು ಸೂಕ್ತ ಕ್ರಮ ವಹಿಸಲಾಗುವುದು ಎಂದು ತಹಸೀಲ್ದಾರ್ ಭರವಸೆ ನೀಡಿದರು. ವಿವಿಧ ಇಲಾಖೆಗಳಿಗೆ ಸಾರ್ವಜನಿಕರಿಂದ 80 ಅರ್ಜಿಗಳು ಸಲ್ಲಿಕೆಯಾಗಿದ್ದು, ಎಲ್ಲ ವಿಲೇವಾರಿ ಮಾಡಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts