ಯಲಬುರ್ಗಾ: ಅಂಗವಿಕಲರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸೆಲ್ಕೋ ಫೌಂಡೇಷನ್ ನೆರವಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಪಪಂ ಮುಖ್ಯಾಧಿಕಾರಿ ನಾಗೇಶ ಹೇಳಿದರು.
ಪಟ್ಟಣದ ಬುದ್ಧ ಬಸವ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಸೆಲ್ಕೋ ಫೌಂಡೇಷನ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವೀರಭದ್ರೇಶ್ವರ ವಿಕಲಚೇತನರ ಗ್ರಾಮೀಣಾಭಿವೃದ್ಧಿ, ಶಿಕ್ಷಣ ಸಂಸ್ಥೆ ಹಾಗೂ ತಾಪಂ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಂಗವಿಕಲರ ಸೌರ ಸ್ವಉದ್ಯೋಗ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಅಂಗವಿಕಲರ ಸ್ವಉದ್ಯೋಗ ಜತೆಗೆ ಆರ್ಥಿಕ ಸಬಲೀಕರಣಕ್ಕೆ ಅನುಕೂಲವಾಗಲಿದೆ. ಸರ್ಕಾರ ಅಂಗವಿಕಲರ ಕಲ್ಯಾಣಕ್ಕಾಗಿ ಶೇ.5 ಅನುದಾನ ಮೀಸಲಿರಿಸಿದೆ. ವಿವಿಧ ಸಂಘ ಸಂಸ್ಥೆಗಳ ನೆರವು ನೀಡುತ್ತಿವೆ. ಸೆಲ್ಕೋ ಫೌಂಡೇಷನ್ ಅಂಗವಿಕಲರಿಗಾಗಿ ಸೌರ ಸ್ವಉದ್ಯೋಗ ಮೂಲಕ ಬದುಕು ಕಟ್ಟಿಕೊಡುವ ಕೆಲಸ ಮಾಡುತ್ತಿರುವುದು ಹೆಮ್ಮೆ ವಿಷಯ ಎಂದರು.
ಸೆಲ್ಕೋ ಸಂಸ್ಥೆ ವ್ಯವಸ್ಥಾಪಕ ಮಂಜುನಾಥ ಭಾಗವತ್ ಮಾತನಾಡಿ, ಜಿಲ್ಲೆಯ ಅಂಗವಿಕಲರ ಕಲ್ಯಾಣಕ್ಕಾಗಿ ಮೂರು ಸಾವಿರಕ್ಕೂ ಅಧಿಕ ಸೌರ ಸ್ವಉದ್ಯೋಗವನ್ನು ಸಂಸ್ಥೆಯಿಂದ ಕಲ್ಪಿಸಲಾಗಿದೆ. ಸಮಾಜದಲ್ಲಿ ಯಾರಿಗೂ ಹೊರೆಯಾಗಬಾರದು ಎಂಬ ಉದ್ದೇಶದಿಂದ ಸ್ವಾವಲಂಬಿ ಬದುಕಿಗೆ ಸಹಕಾರಿಸಲಾಗಿದೆ ಎಂದರು.
ತಾಪಂ ಇಒ ಸಂತೋಷ ಪಾಟೀಲ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವೆಂಕಟೇಶ್ ದೇಶಪಾಂಡೆ, ವೀರಭದ್ರೇಶ್ವರ ವಿಕಲಚೇತನ ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ಈರಪ್ಪ ಕರೆಕುರಿ, ಎನ್‌ಆರ್‌ಎಲ್‌ಎಂ ತಾಲೂಕು ಅಧಿಕಾರಿ ಉದಯಕುಮಾರ, ಪ್ರಮುಖರಾದ ಪ್ರಕಾಶ ಮೇಟಿ, ಚಂದ್ರಶೇಖರ ಮಡಿವಾಳರ್, ಮಂಜುಳಾ ಶಾನೂರಪ್ಪ, ಭೀಮವ್ವ , ಜಯಶ್ರೀ ಗುಳಗಣ್ಣವರ, ಶಂಕ್ರಮ್ಮ ಇತರರಿದ್ದರು.