ಅಸಾಧ್ಯವಾದುದನ್ನು ಸಾಧಿಸಿ ತೋರಿಸುವಳು ಮಹಿಳೆ

ಯಲಬುರ್ಗಾ: ಮಹಿಳೆ ಮನಸ್ಸು ಮಾಡಿದರೆ ಅಸಾಧ್ಯವಾದುದನ್ನು ಸಾಧಿಸಿ ತೋರಿಸುವ ಛಲ ಹೊಂದಿರುವಳು ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಉಮಾ ಅಕ್ಕ ಹೇಳಿದರು.

ಪಟ್ಟಣದ ಹೌಸಿಂಗ್‌ಬೋರ್ಡ್ ಕಾಲನಿಯ ಸ್ತ್ರೀ ಶಕ್ತಿ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವವೃದ್ಧಿ ಯೋಜನೆ ಹಾಗೂ ಜ್ಞಾನ ವಿಕಾಸ ಕೇಂದ್ರಗಳ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸೃಜನಶೀಲ ಸಮಾರೋಪ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರತಿಯೊಬ್ಬರೂ ಮಹಿಳೆಯರನ್ನು ಗೌರವದಿಂದ ಕಾಣಬೇಕು. ಮಹಿಳೆಯರು ಯಾವುದಕ್ಕೂ ಹಿಂಜರಿಯದೇ ಪ್ರತಿಯೊಂದು ರಂಗದಲ್ಲಿ ಭಾಗವಹಿಸಿ ಸಾಧನೆ ಮಾಡಬೇಕು ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮುರಳಿಧರ ಎಚ್.ಎಲ್., ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯ ಶರಣಬಸಪ್ಪ ದಾನಕೈ ಮಾತನಾಡಿದರು. ಸಾಧಕ ಮಹಿಳೆಯರಿಗೆ, ಶತಾಯುಷಿಗಳಿಗೆ ಸನ್ಮಾನ ಮಾಡಲಾಯಿತು. ವಿವಾಹ ನೊಂದಾಯಿತರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ತಾಪಂ ಅಧ್ಯಕ್ಷೆ ಲಕ್ಷ್ಮಿ ದ್ಯಾಮಪ್ಪ ಗೌಡ್ರ ಅಧ್ಯಕ್ಷತೆ ವಹಿಸಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ರಾಜೇಶ್, ಪಪಂ ಮಾಜಿ ಅಧ್ಯಕ್ಷೆ ಜಯಶ್ರೀ ಅರಕೇರಿ, ಒಕ್ಕೂಟದ ಅಧ್ಯಕ್ಷೆ ರತ್ನಮ್ಮ ತಳಕಲ್, ಮಹಿಳಾ ಜ್ಞಾನ ವಿಕಾಸ ಕೇಂದ್ರದ ಸಂಪನ್ಮೂಲ ವ್ಯಕ್ತಿ ಸುಧಾ, ಶೈಲಾಶ್ರೀ ಬಾಪುಗೌಡ ಪಾಟೀಲ್, ಅನ್ನಪೂರ್ಣ ಹಿರೇಕುರುಬರ್, ಗೌರಮ್ಮ ಬಡಿಗೇರ್ ಇದ್ದರು.