ವೋಟರ್ ಐಡಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿಸಿ; ತಾಪಂ ಇಒ ಸಂತೋಷ ಪಾಟೀಲ್ ಸೂಚನೆ

blank

ಯಲಬುರ್ಗಾ: ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಮತದಾರರ ಪಟ್ಟಿಯಲ್ಲಿ ನೋಂದಾಯಿತ ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿಸಬೇಕು ಎಂದು ತಾಪಂ ಇಒ ಸಂತೋಷ ಪಾಟೀಲ್ ಹೇಳಿದರು.

ಪಟ್ಟಣದ ತಾಪಂ ಕಚೇರಿ ಸಭಾಂಗಣದಲ್ಲಿ ಸಿಬ್ಬಂದಿ ಹಾಗೂ 22 ಗ್ರಾಪಂ ಪಿಡಿಒ, ಕಾರ್ಯದರ್ಶಿ, ಕರವಸೂಲಿಗಾರರಿಗೆ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು. ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮತ್ತು ಧೃಢೀಕರಿಸಲು ಆಯೋಗ ನಿರ್ದೇಶನ ನೀಡಿದೆ. ಈ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ದಿನಕ್ಕೆ ಶೇ.10 ಮತದಾರರ ಆಧಾರ್ ಜೋಡಣೆ ಕಾರ್ಯ ಕೈಗೊಳ್ಳಲು ನಿರ್ದೇಶಿಸಿದ್ದಾರೆ. ಆದ್ದರಿಂದ ನಿಗದಿತ ಪ್ರಗತಿ ಸಾಧಿಸಲು ಜಿಲ್ಲಾ ಹಾಗೂ ತಾಲೂಕುಗಳಿಗೆ ನೋಡಲ್ ಅಧಿಕಾರಿ ನೇಮಿಸಿ ಆದೇಶಿಸಿದ್ದಾರೆ ಎಂದರು. ನರೇಗಾ ಐಇಸಿ ಸಂಯೋಜಕ ಶರಣಪ್ಪ ಹಾಳಕೇರಿ, ವೋಟರ್ ಹೆಲ್ಪ್‌ಲೈನ್ ಆ್ಯಪ್ ಮೂಲಕ ಆಧಾರ್ ನೋಂದಣಿ ಮಾಡುವ ಕುರಿತು ಮಾಹಿತಿ ನೀಡಿದರು. ಯೋಜನಾ ನಿರ್ದೇಶಕ ಶಿವರಾಜ, ಲೆಕ್ಕಾಧಿಕಾರಿ ಹಜರತ್‌ಅಲಿ ಇತರರಿದ್ದರು.

Share This Article

ಬಿಸಿಲಲ್ಲಿ ಸೆಖೆ ತಾಳಲಾರದೆ ICE ನೀರು ಕುಡಿದ್ರೆ ಜೀವಕ್ಕೆ ಅಪಾಯ ಖಂಡಿತ! Summer Health

Summer Health: ನೀರು ಮನುಷ್ಯರಿಗೆ ಬಹಳ ಅವಶ್ಯಕ. ನಾವು ಅನ್ನ ತಿನ್ನದೆ ಬದುಕಬಹುದು, ಆದರೆ ನೀರು…

ತಾಳಲಾರದ ಬೇಗೆ, ತಡೆಯುವುದು ಹೇಗೆ? ಎಸಿ, ಕೂಲರ್ ಈ ಎರಡರಲ್ಲಿ ಯಾವುದು ಬೆಸ್ಟ್​? ಇಲ್ಲಿದೆ ನೋಡಿ ಉತ್ತರ | Summer

Summer: ಇದು ಬೇಸಿಗೆ ಕಾಲ. ಕೇವಲ ಬೇಸಿಗೆ ಅಲ್ಲ ಮುಂದಿನ ಎರಡು ತಿಂಗಳಲ್ಲಿ ಬಿರು ಬೇಸಿಗೆ…

ಒಂದು ಪ್ರೀತಿಯ ಅಪ್ಪುಗೆ ಸಾಕು! ವಾಸಿ ಮಾಡುತ್ತೆ ನಾನಾ ಕಾಯಿಲೆ… hugging

hugging : ಫೆಬ್ರವರಿ 12 ರಂದು ಅಪ್ಪುಗೆಯ ದಿನ, ಅಂದರೆ ಪ್ರೀತಿಪಾತ್ರರನ್ನು ಅಪ್ಪಿಕೊಳ್ಳುವ ಮೂಲಕ ಅವರ…