More

    ಮತದಾರ ಪಟ್ಟಿ ಪರಿಶೀಲಿಸಿಕೊಳ್ಳಿ

    ಯಳಂದೂರು(ಚಾಮರಾಜನಗರ): ಪ್ರತಿಯೊಬ್ಬರೂ ಬೂತ್ ಮಟ್ಟದಲ್ಲಿ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ಎ.ಆರ್.ಕೃಷ್ಣಮೂರ್ತಿ ಸಲಹೆ ನೀಡಿದರು.


    ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾನುವಾರ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಬೂತ್‌ಮಟ್ಟದ ಪ್ರಜಾಪ್ರತಿನಿಧಿ, ಮುಖಂಡರಿಗೆ ಹಮ್ಮಿಕೊಂಡಿದ್ದ ಕಾರ್ಯಗಾರದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಬಹುತೇಕ ಕ್ಷೇತ್ರಗಳಲ್ಲಿ 5 ರಿಂದ 10 ಸಾವಿರ ಮತದಾರನ್ನು ಪಟ್ಟಿಯಿಂದ ಕೈ ಬಿಟ್ಟಿದೆ. ಜನರನ್ನು ಮತದಾನದ ಹಕ್ಕಿನಿಂದ ವಂಚಿತಗೊಳಿಸುವ ಹುನ್ನಾರ ಮಾಡುತ್ತಿದೆ ಎಂದು ದೂರಿದರು.
    ರಾಜ್ಯದ 224 ಕ್ಷೇತ್ರಗಳಲ್ಲೂ ಮತದಾರರನ್ನು ಡಿಲೀಟ್ ಮಾಡುವ ಕೆಲಸವನ್ನು ಬಿಎಲ್‌ಒಗಳಿಂದ ಸರ್ಕಾರ ಮಾಡಿಸುತ್ತಿದೆ. ಹಾಗಾಗಿ ಮತದಾರರು ಜಾಗೃತರಾಗಿರಬೇಕು ಎಂದರು.


    ಮಾಜಿ ಶಾಸಕ ಎಸ್.ಜಯಣ್ಣ ಮಾತನಾಡಿ, ಕೊಳ್ಳೇಗಾಲ ಮೀಸಲು ಕ್ಷೇತ್ರದಲ್ಲಿ 13 ಸಾವಿರ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ. 22 ಸಾವಿರ ಜನರನ್ನು ಹೊಸದಾಗಿ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಇದು ನಿಖರವಾಗಿದೆಯೇ ಎಂಬುದನ್ನು ಪರಿಶೀಲಿಸಲು ಕಾಂಗ್ರೆಸ್ ಪಕ್ಷ ಪ್ರತಿ ಬೂತ್ ಮಟ್ಟದ ಏಜೆಂಟರನ್ನು ನೇಮಿಸಿದೆ ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಮಾಜಿ ಶಾಸಕ ಎಸ್. ಬಾಲರಾಜು, ಪಕ್ಷದ ಜಿಲ್ಲಾಧ್ಯಕ್ಷ ಮರಿಸ್ವಾಮಿ, ಯುವ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಅಜೀಜ್, ನಗರಸಭಾಅಧ್ಯಕ್ಷೆ ರೇಖಾ ರಮೇಶ್, ಉಪಾಧ್ಯಕ್ಷೆ ಸುಶೀಲಾ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts