More

  ಶಾಲಾ ಮಕ್ಕಳಿಗೆ ಬಲವರ್ಧನ ಕಿಟ್ ವಿತರಣೆ

  ಯಳಂದೂರು: ತಾಲೂಕಿನ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ಶೈಕ್ಷಣಿ ಪ್ರಗತಿಗಾಗಿ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಶಿಕ್ಷಣ ಫೌಂಡೇಷನ್ ವತಿಯಿಂದ ಬಲವರ್ಧನ ಕಿಟ್‌ಗಳನ್ನು ಇತ್ತೀಚೆಗೆ ಪಟ್ಟಣ ಬಿಆರ್‌ಸಿ ಕೇಂದ್ರದಲ್ಲಿ ಶಾಲೆಯ ಮುಖ್ಯಶಿಕ್ಷಕರಿಗೆ ವಿತರಿಸಲಾಯಿತು.

  ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರ ರಾಜೇ ಅರಸ್ ಮಾತನಾಡಿ, ಮಕ್ಕಳಲ್ಲಿ ಕಲಿಕಾ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಶಿಕ್ಷಕರಿಗೆ ತರಬೇತಿ ನೀಡಿ ಕಲಿಕಾ ಕಿಟ್‌ಗಳನ್ನು ವಿತರಣೆ ಮಾಡಲಾಗುತ್ತಿದೆ. ಇದರಲ್ಲಿ ಮಕ್ಕಳ ಕಲಿಕೆಗೆ ಪೂರಕವಾಗಿರುವ ಎಲ್ಲ ವಸ್ತುಗಳಿದ್ದು, ಇದರ ಬಳಕೆ ಬಗ್ಗೆ ಈಗಾಗಲೇ ಶಿಕ್ಷಕರಿಗೆ ತರಬೇತುಗೊಳಿಸಲಾಗಿದೆ. ಇದರಿಂದ ಮಕ್ಕಳಲ್ಲಿ ಕಲಿಕೆಯಲ್ಲಿ ಇನ್ನಷ್ಟು ಪ್ರಗತಿಯನ್ನು ಕಾಣಬಹುದು ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಕಾಂತರಾಜು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಶಂಕರ್, ಬಿಆರ್‌ಪಿ ರಂಗಸ್ವಾಮಿ, ಸತೀಶ್, ಶಿಕ್ಷಣ ಸಂಯೋಜಕ ಸುರೇಶ್‌ಕುಮಾರ್, ಸಿಆರ್‌ಪಿ ಎಸ್.ರೇಚಣ್ಣ, ಶಿಕ್ಷಣ ಫೌಂಡೇಷನ್‌ನ ಗಿರೀಶ್ ಇತರರು ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts