More

    ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ

    ಯಳಂದೂರು : ಏ.26 ರಂದು ನಡೆಯುವ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ ಎಂದು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಆರ್.ಉಮೇಶ್ ತಿಳಿಸಿದರು.

    ಪಟ್ಟಣ ಪಂಚಾಯಿತಿ, ಕಾಲೇಜು ಶಿಕ್ಷಣ ಇಲಾಖೆ, ತಾಲೂಕು ಪಂಚಾಯಿತಿ ಮತ್ತು ಸ್ವೀಪ್ ಸಮಿತಿ ವತಿಯಿಂದ ಯಳಂದೂರು ಪಟ್ಟಣದಲ್ಲಿ ಲೋಕಸಭಾ ಚುನಾವಣಾ 2024ರ ಹಿನ್ನೆಲೆಯಲ್ಲಿ ಮಂಗಳವಾರ ‘ಚುನಾವಣಾ ಪರ್ವ- ದೇಶದ ಗರ್ವ’ ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಿದ್ದ ಮತದಾನ ಜಾಗೃತಿ ಜಾಥಾಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

    ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ 18 ವರ್ಷ ಮೇಲ್ಪಟ್ಟಿರುವ ಪ್ರತಿಯೊಬ್ಬ ಪ್ರಜೆಯೂ ಮತದಾನ ಮಾಡುವ ಹಕ್ಕನ್ನು ಹೊಂದಿದ್ದು ತಮ್ಮ ಹಕ್ಕನ್ನು ಚಲಾಯಿಸಿ ತಮಗೆ ಸೂಕ್ತವಾದ ವ್ಯಕ್ತಿಯನ್ನು ಆಯ್ಕೆ ಮಾಡುವ ಅವಕಾಶವನ್ನು ನಮ್ಮ ಸಂವಿಧಾನ ಕಲ್ಪಿಸಿದೆ. ಹೀಗಾಗಿ ಎಲ್ಲರೂ ಮತ ಚಲಾಯಿಸಿ ಶೇ.100ರಷ್ಟು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ತಿಳಿಸಿದರು.

    ನಗರದ ಪ್ರಮುಖ ಬೀದಿಗಳಲ್ಲಿ ವೈಎಂಎಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಮೆರವಣಿಗೆ ನಡೆಸಿ ಸಾರ್ವಜನಿಕರಲ್ಲಿ ಮತದಾನದ ಅರಿವು ಮೂಡಿಸಿದರು. ಪಟ್ಟಣದ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಲಾಯಿತು. ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಹೇಶ್ ಕುಮಾರ್ ಪ್ರತಿಜ್ಞಾ ವಿಧಿ ಬೋಧಿಸಿದರು.

    ತಾಲೂಕು ಯೋಜನಾಧಿಕಾರಿ ಗುರು ಮಹದೇವ, ಸಹಾಯಕ ನಿರ್ದೇಶಕಿ ರಾಧಮ್ಮಾ, ತಾಲೂಕು ಪಂಚಾಯಿತಿ ಕಚೇರಿ ವ್ಯವಸ್ಥಾಪಕ ವೆಂಕಟಾಚಲ, ವೈಎಂಎಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ವಿಜಯ್ ಹಾಗೂ ಕಾಲೇಜಿನ ಎಲ್ಲ ಪ್ರಾಧ್ಯಾಪಕರು ಮತ್ತು ಸಿಬ್ಬಂದಿ, ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts