More

    ಯಲ್ಲಮ್ಮ ಗುಡ್ಡದತ್ತ ಮುಖ ಮಾಡಿದ ಭಕ್ತರು

    ಉಗರಗೋಳ: ಕರೊನಾ ಮಹಾಮಾರಿ ಆತಂಕ ನಿವಾರಣೆಗೆ ಸರ್ಕಾರ ನಿಯಮಾವಳಿ ರೂಪಿಸಿದ್ದರೂ ಯಲ್ಲಮ್ಮನ ಗುಡ್ಡದತ್ತ ಭಕ್ತರು ಆಗಮಿಸುತ್ತಲೇ ಇದ್ದಾರೆ. ಶನಿವಾರ ಶೀಗಿ ಹುಣ್ಣಿಮೆ ನಿಮಿತ್ತ ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮನ ಗುಡ್ಡದತ್ತ ಮುಖ ಮಾಡಿದ ಭಕ್ತರನ್ನು ಪೊಲೀಸರು ಐದು ಕಿ.ಮೀ.ದೂರದಲ್ಲೇ ತಡೆದರು.

    ಶುಕ್ರವಾರ ಮಧ್ಯರಾತ್ರಿಯಿಂದಲೇ ಶ್ರೀ ಕ್ಷೇತ್ರಕ್ಕೆ ಭಕ್ತರ ದಂಡು ಸಾಗರೋಪಾದಿಯಲ್ಲಿ ಹರಿದು ಬರತೊಡಗಿತು. ಪರಿಸ್ಥಿತಿ ಅರಿತ ಪೊಲೀಸ್ ಇಲಾಖೆ ಸಿಬ್ಬಂದಿ ಗುಡ್ಡದಲ್ಲಿ ಸೂಕ್ತ ಬಂದೋಬಸ್ತ್ ಕೈಗೊಂಡಿತು. ಗುಡ್ಡಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳಲ್ಲಿ ವಾಹನ ಸಂಚಾರವನ್ನೇ ನಿಬರ್ಂಧಿಸಿತು. ಹಾಗಾಗಿ, ಭಕ್ತರು ಹಿರೇಕುಂಬಿ, ಉಗರಗೋಳ, ಹರ್ಲಾಪುರ, ಚಿಕ್ಕುಂಬಿ ಹಾಗೂ ರಸ್ತೆಯ ಬದಿಯಲ್ಲಿ ಪರಡಿ ತುಂಬಿ ದೇವಿಗೆ ನೈವೇದ್ಯ ಅರ್ಪಿಸಿದರು.

    ಯಲ್ಲಮ್ಮ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ಮಾತನಾಡಿ, ಕೋವಿಡ್-19 ನಿಯಂತ್ರಣಕ್ಕಾಗಿ ಉಭಯ ಸರ್ಕಾರಗಳು ಪ್ರಕಟಿಸಿದ್ದ ಮಾರ್ಗಸೂಚಿಯನ್ನು ಅನುಸರಿಸಿ, ದೇವಸ್ಥಾನದಲ್ಲಿ ಧಾರ್ಮಿಕ ವಿಧಿ-ವಿಧಾನ ಕೈಗೊಳ್ಳಲಾಗುತ್ತಿದೆ. ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ರಾಜ್ಯ ಹಾಗೂ ಹೊರರಾಜ್ಯಗಳು ಮತ್ತು ವಿಶೇಷವಾಗಿ ಮಹಾರಾಷ್ಟ್ರದಿಂದ ಹೆಚ್ಚಿನ ಭಕ್ತಾದಿಗಳು ಆಗಮಿಸುತ್ತಾರೆ. ನ.30 ರವರೆಗೆ ಭಕ್ತರ ಪ್ರವೇಶ ನಿಷೇಧವನ್ನು ವಿಸ್ತರಿಸಲಾಗಿದೆ. ಭಕ್ತ ಸಮುದಾಯ ಸಹಕರಿಸಬೇಕು ಎಂದು ಮನವಿ ಮಾಡಿದರು.

    ಯಲ್ಲಮ್ಮನಗುಡ್ಡಕ್ಕೆ ಸಂಪರ್ಕ ಕಲ್ಪಿಸುವ ಉಗರಗೋಳ, ಜೋಗುಳಬಾವಿ ಹಾಗೂ ನೂಲಿನ ಗಿರಣಿಯ ರಸ್ತೆಗಳು ಜನರಿಂದ ತುಂಬಿ ತುಳುಕುತ್ತಿದ್ದವು.

    ಭಕ್ತರನ್ನು ಹಾಗೂ ವಾಹನವನ್ನು ಯಲ್ಲಮ್ಮನ ಗುಡ್ಡಕ್ಕೆ ಬಿಡದೆ ಕಟ್ಟುನಿಟ್ಟಿನ ಕ್ರಮವನ್ನು ಸಿಪಿಐ ಮಂಜುನಾಥ ನಡುವಿನಮನಿ ಹಾಗೂ ಪಿಎಸ್‌ಐ
    ನಾಗನಗೌಡ ಕಟ್ಟಿಮನಿಗೌಡ್ರ ತಮ್ಮ ಸಿಬ್ಬಂದಿಯೊಂದಿಗೆ ಕೈಗೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts