ಯಲ್ಲಮ್ಮನ ಗುಡ್ಡಕ್ಕೆ ಜಿಲ್ಲಾಧಿಕಾರಿ ಭೇಟಿ

blank

ಉಗರಗೋಳ: ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಭಾನುವಾರ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ ಭೇಟಿ ನೀಡಿ ಆದಿಶಕ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದರ್ಶನಾಶೀರ್ವಾದ ಪಡೆದರು.

ಯಲ್ಲಮ್ಮ ದೇವಸ್ಥಾನದ ಪರವಾಗಿ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ಜಿಲ್ಲಾಧಿಕಾರಿಗಳನ್ನು ಸತ್ಕರಿಸಿದರು.

ಬಳಿಕ ಅಧಿಕಾರಿಗಳೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿ, ದೇವಸ್ಥಾನದ ಆವರಣದಲ್ಲಿ ಕರೊನಾ ನಿಯಂತ್ರಣ ಕ್ರಮ ಕಟ್ಟುನಿಟ್ಟಾಗಿ ಪಾಲಿಸಬೇಕು. ದೇವಸ್ಥಾನ ಹಾಗೂ ಸುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆಗೆ ಒತ್ತು ನೀಡಬೇಕೆಂದು ಸೂಚಿಸಿದರು. ಲೋಕಸಭೆ ಉಪಚುನಾಣೆ ನೀತಿಸಂಹಿತೆ ಜಾರಿಯಲ್ಲಿದ್ದು, ಶ್ರೀ ಕ್ಷೇತ್ರದಲ್ಲಿ ಜನರು ಗುಂಪಾಗಿ ಸೇರದಂತೆ ಎಚ್ಚರ ವಹಿಸಬೇಕು. ಚುನಾವಣೆ ನೀತಿ ಸಂಹಿತೆಯನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದರು.

ಸಹಾಯಕ ಚುನಾವಣಾಧಿಕಾರಿ ಸುಭಾಷ ಸಂಪಗಾವಿ, ಸವದತ್ತಿ ತಹಸೀಲ್ದಾರ್ ಪ್ರಶಾಂತ ಪಾಟೀಲ, ದೇವಸ್ಥಾನ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ನಾಗರತ್ನಾ ಚೋಳಿನ, ಡಿ.ಆರ್.ಚವ್ಹಾಣ, ಅಲ್ಲಮಪ್ರಭು ಪ್ರಭುನವರ, ಆರ್.ಎಚ್. ಸವದತ್ತಿ, ಸದಾನಂದ ಈಟಿ, ಪ್ರಕಾಶ ಪ್ರಭುನವರ, ಬೋಗಾರ ಇತರರು ಇದ್ದರು.

Share This Article

ಈ ಅಭ್ಯಾಸಗಳಿಂದ ನೀವು ಶ್ವಾಸಕೋಶ ಕ್ಯಾನ್ಸರ್​ಗೆ​ ತುತ್ತಾಗಬಹುದು ಎಚ್ಚರ! ತಡೆಗಟ್ಟದ್ದಿದ್ರೆ ಸಾವು ಕಟ್ಟಿಟ್ಟಬುತ್ತಿ | Lung Cancer

Lung Cancer: ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಕಾಯಿಲೆಗೆ ತುತ್ತಾದವರ ಸಂಖ್ಯೆ ಗಣನೀಯವಾಗಿ ಏರಿಕೆ ಆಗುತ್ತಿದೆ. ವಯಸ್ಸಿನ…

ಪೂರ್ವಾಭಿಮುಖವಾಗಿ ಕುಳಿತು ಪೂಜೆ ಮಾಡುವುದೇಕೆ?; ಇಲ್ಲಿದೆ ಈ ಮಾತಿನ ಹಿಂದಿನ ಅಸಲಿ ಕಾರಣ | Health Tips

ಪೂಜೆ ಮಾಡುವಾಗ ಹೇಗೆ ನಿಯಮಗಳು ಮತ್ತು ನಿಬಂಧನೆಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಲಾಗುತ್ತದೆಯೋ ಅದೇ ರೀತಿಯಲ್ಲಿ ದಿಕ್ಕನ್ನು ಸಹ ಮನಸ್ಸಿನಲ್ಲಿಟ್ಟುಕೊಳ್ಳುವುದು…

ಊಟದ ಬಳಿಕ ಹೊಟ್ಟೆಯು ಬಲೂನ್‌ನಂತೆ ಊದಿಕೊಳ್ಳುತ್ತದೆಯೇ?; ಸಮಸ್ಯೆಗೆ ಇಲ್ಲಿದೆ ಪರಿಹಾರ | Health Tips

ಇತ್ತೀಚೆಗೆ ಜೀವನಶೈಲಿ ಮತ್ತು ಊಟದಿಂದಾಗಿ ಗ್ಯಾಸ್​​ ಸಮಸ್ಯೆಯು ತುಂಬಾ ಸಾಮಾನ್ಯವಾಗಿದೆ. ಇದು ಅನೇಕ ಕಾರಣಗಳಿಂದ ಉಂಟಾಗಬಹುದು.…