More

    ಯಾರದೋ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ

    ಚಿಕ್ಕಮಗಳೂರು: ರಾಜ್ಯ ಸರ್ಕಾರ ಯಾರದೋ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ ಮಾಡುತ್ತಿದೆ ಹಾಗೂ ಯಾರದ್ದೋ ಮದುವೆಯಲ್ಲಿ ಉಂಡವನೇ ಜಾಣ ಎಂಬಂತೆ ವರ್ತಿಸುತ್ತಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.

    ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನೆ ದಾಳಿಗೆ ಮೃತಪಟ್ಟ ಕೇರಳದ ವ್ಯಕ್ತಿಗೆ ಕರ್ನಾಟಕ ಸರ್ಕಾರ ಪರಿಹಾರ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
    ಆನೆ ದಾಳಿ ನಡೆದಿರುವುದು ಕೇರಳದಲ್ಲಿ. ಮೃತಪಟ್ಟವರು ಕೇರಳದವರು. ಹೀಗಿರುವಾಗ ಕರ್ನಾಟಕ ರಾಜ್ಯ ಸರ್ಕಾರ ಪರಿಹಾರ ನೀಡಿದ್ದು ಏಕೆ ಎಂದು ಪ್ರಶ್ನಿಸಿದ ಅವರು, ಆನೆ ಕರ್ನಾಟಕದ್ದಾ, ಕೇರಳದ್ದಾ ಅಥವಾ ತಮಿಳುನಾಡಿನದ್ದಾ ಎಂದು ಸೀಲ್ ಹಾಕಿದ್ದಾರೆಯೇ ಎಂದು ಪ್ರಶ್ನಿಸಿದ್ದರು.
    ಕೇರಳದಲ್ಲಿ ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರವೇ ಇದೆ. ಅವರ ಬಳಿ ಆನೆ ದಾಳಿಯಿಂದ ಮೃತಪಟ್ಟವರಿಗೆ ಪರಿಹಾರ ಕೊಡಿಸುವ ಯೋಗ್ಯತೆ ಇಲ್ಲವೇ ಎಂದು ಕಿಡಿಕಾರಿದರು.
    ಸಿಎಂ ಸಿದ್ದರಾಮಯ್ಯ ಅವರು ನನ್ನ ತೆರಿಗೆ ನನ್ನ ಹಕ್ಕು ಎಂದು ಎದೆ ತಟ್ಟಿಕೊಂಡು ನಾಟಕ ಮಾಡುತ್ತಾರೆ. ಆದರೆ ರಾಜ್ಯಕ್ಕೆ ಸಂಬಂಧವಿಲ್ಲದ ಪ್ರಕರಣದಲ್ಲಿ 15 ಲಕ್ಷ ವ್ಯಯ ಮಾಡುತ್ತಾರೆ. ಕೇರಳದ ಸಂಸದರಾಗಿರುವ ರಾಹುಲ್ ಗಾಂಧಿ ತಾಳಕ್ಕೆ ತಕ್ಕಂತೆ ರಾಜ್ಯ ಕಾಂಗ್ರೆಸ್ ಕುಣಿಯುತ್ತಿದೆ. ತನ್ನ ಧಣಿಗಳ ಮನ ಮೆಚ್ಚಿಸಲು ಈ ರೀತಿ ಮಾಡುತ್ತಿದ್ದಾರೆಯೇ ಎಂದು ಅನುಮಾನ ವ್ಯಕ್ತಪಡಿಸಿದರು.
    ನಕಲಿ ಗಾಂಧಿಗಳ ಹಿತರಕ್ಷಣೆಗೆ ಕನ್ನಡಿಗರ ಹಿತಾಸಕ್ತಿ ಬಲಿ ನೀಡಬೇಕೇ ಎಂದು ಪ್ರಶ್ನಿಸಿರುವ ಸಿ.ಟಿ.ರವಿ ಅವರು, ತುಗಲಕ್ ದರ್ಬಾರ್ ಅನ್ನುವುದನ್ನು ಓದಿದ್ದೆವು ಆದರೆ ಸಿದ್ದರಾಮಯ್ಯ ಅವರ ಆಡಳಿತದಲ್ಲಿ ಅದನ್ನು ನೋಡುತ್ತಿದ್ದೇವೆ. ಇದು ಕನ್ನಡಿಗರ ದುರ್ದೈವ ಎಂದು ಬೇಸರ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts