

Yash And Radhika Pandit : ನಟಿ ರಾಧಿಕಾ ಪಂಡಿತ್ ಅವರು ಕೋರ್ಟ್ ಕಟಕಟೆಯಲ್ಲಿ ನಿಂತಿದ್ದಾರೆ. ಅವರ ಪತಿ ಯಶ್ ಜೋರಾಗಿ ವಾದ ಮಾಡಿದ್ದಾರೆ. ಈ ಕುರಿತಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದೇನು ಹೊಸ ಸುದ್ದಿ ಎಂದು ಕಾಮೆಂಟ್ ಮಾಡಿದ್ದಾರೆ.
ಯಶ್ ಮತ್ತು ರಾಧಿಕಾ ಪಂಡಿತ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಜಾಹೀರಾತನ್ನು ಹಂಚಿಕೊಂಡಿದ್ದಾರೆ. ಈ ಜಾಹೀರಾತಿಗಾಗಿ ಜೋಡಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ರಾಧಿಕಾ ಪಂಡಿತ್ ಅವರು ಮೋಸಕ್ಕೆ ಒಳಗಾದ ಗ್ರಾಹಕಿಯ ಪಾತ್ರ ಮಾಡಿದ್ದಾರೆ. ಅವರಿಗೆ ನ್ಯಾಯ ಕೊಡಿಸಲು ಬಂದ ಲಾಯರ್ ಪಾತ್ರದಲ್ಲಿ ಯಶ್ ಕಾಣಿಸಿಕೊಂಡಿದ್ದಾರೆ. ಕಂಪನಿಯ ನಿಜವಾದ ಅಡುಗೆ ಎಣ್ಣೆ ಯಾವುದು ಎಂಬುದನ್ನು ಸಾಬೀತು ಮಾಡಲು ಯಶ್ ಬಿರುಸಿನಿಂದ ವಾದ ಮಾಡಿದ್ದಾರೆ. ಈ ರೀತಿಯ ದೃಶ್ಯ ಜಾಹೀರಾತಿನಲ್ಲಿ ಇದೆ.
ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ರಾಮಾಯಣ’ ಸಿನಿಮಾದಲ್ಲಿ ಅವರು ರಾವಣನ ಪಾತ್ರ ಮಾಡುತ್ತಿದ್ದಾರೆ.
ರಾಧಿಕಾ ಪಂಡಿತ್ ಅವರು ಕನ್ನಡ ಚಿತ್ರರಂಗದ ಸ್ಟಾರ್ ನಟಿ. ಆದರೆ ಅವರು ಮದುವೆ ಬಳಿಕ ಸಿನಿಮಾದಲ್ಲಿ ನಟಿಸುವುದು ಕಡಿಮೆ ಆಯಿತು. ಜಾಹೀರಾತುಗಳಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಜೊತೆ ಅವರು ಸಂಪರ್ಕದಲ್ಲಿ ಇದ್ದಾರೆ.