More

    ಪ್ರಭಾವಿ ರಾಜಕಾರಣಿಯೊಬ್ಬರಿಂದ ಚುನಾವಣಾ ಪ್ರಚಾರಕ್ಕೆ ಬರುವಂತೆ ಯಶ್​​ಗೆ ಆಹ್ವಾನ?

    ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದೆ. ಮೂರು ಪಕ್ಷದ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ನಾನಾ ಕಸರತ್ತು ನಡೆಸುತ್ತಿದ್ದಾರೆ. ಇದೆಲ್ಲದರ ನಡುವೆ ಸಿಎಂ ಬೊಮ್ಮಾಯಿ ತಮ್ಮ ಪರ ಪ್ರಚಾರಕ್ಕೆ ನಟ ಕಿಚ್ಚ ಸುದೀಪ್ ಅವರನ್ನು ಕರೆ ತಂದಿದ್ದಾರೆ. ಒಂದರ್ಥದಲ್ಲಿ ಸುದೀಪ್ ಪರೋಕ್ಷವಾಗಿ ಬಿಜೆಪಿ ಪರ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದರೆ ತಪ್ಪಲ್ಲ.

    ಸಿನಿಮಾ ತಾರೆಯರು ಅಭ್ಯರ್ಥಿಗಳ ಪರ ಮತ ಬೇಟೆಗೆ ಇಳಿಯುವುದು ಇದೇ ಮೊದಲೇನಲ್ಲ. ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ನಟ-ನಟಿಯರನ್ನು ಕರೆತಂದು ರಾಜಕೀಯ ನಾಯಕರು ಪ್ರಚಾರ ನಡೆಸುತ್ತಾರೆ. ಇದೀಗ ನಟ ಸುದೀಪ್ ಚುನಾವಣಾ ಪ್ರಚಾರಕ್ಕೆ ಕಾಲಿಡುತ್ತಿದ್ದ ಈ ಬಾರಿಯ ಚುನಾವಣೆ ಮತ್ತಷ್ಟು ಕುತೂಹಲದ ಘಟ್ಟ ತಲುಪಿದೆ.

    ಇದನ್ನೂ ಓದಿ: ಬೆಂಗಳೂರು | ಚಾಕೊಲೇಟ್ ತಂದು ಕೊಟ್ಟಿಲ್ಲವೆಂದು ಬದುಕು ಅಂತ್ಯಗೊಳಿಸಿದ ವಿವಾಹಿತೆ!

    ಪ್ರಭಾವಿ ನಾಯಕರೊಬ್ಬರ ಪರ ಯಶ್ ಪ್ರಚಾರ?

    ಸುದೀಪ್ ಸಿಎಂ ಬೊಮ್ಮಾಯಿ ಪರ ಪ್ರಚಾರ ಮಾಡುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ನಟ ರಾಕಿಂಗ್ ಸ್ಟಾರ್ ಯಶ್ ಅವರನ್ನು ಚುನಾವಣಾ ಪ್ರಚಾರಕ್ಕೆ ಕರೆತರಲು ಸದ್ದಿಲ್ಲದೆ ಪ್ರಯತ್ನ ನಡೆದಿದೆ ಎನ್ನಲಾಗಿದೆ. ಪ್ರಭಾವಿ ರಾಜಕಾರಣಿಯೊಬ್ಬರು ಯಶ್ ಅವರನ್ನು ಸಂಪರ್ಕಿಸಿ ಪ್ರಚಾರಕ್ಕೆ ಬರುವಂತೆ ಆಹ್ವಾನಿಸಿದ್ದಾರೆ ಎಂದು ಐಎಎನ್​ಎಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

    ಕೆಜಿಎಫ್ ಸಿನಿಮಾದ ನಂತರ ವಿಶ್ವದಾದ್ಯಂತ ನಟ ಯಶ್ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದಾರೆ. ಹೀಗಾಗಿ ಯಶ್ ಅವರು ಚುನಾವಣಾ ಪ್ರಚಾರಕ್ಕೆ ಬಂದರೆ ಮತದಾರರನ್ನು ಸುಲಭವಾಗಬಹುದು ಎಂದು ಪ್ರಭಾವಿ ರಾಜಕಾರಣಿಯೊಬ್ಬರು ಲೆಕ್ಕಾಚಾರ ಹಾಕಿದಂತಿದೆ. ಆದರೆ ನಟ ಯಶ್ ರಾಜಕೀಯ ನಾಯಕರೊಬ್ಬರ ಈ ಆಹ್ವಾನವನ್ನು ತಿರಸ್ಕರಿಸಿದ್ದಾರೆ. ನಾನು ಸಿನಿಮಾ ಕೆಲಸದಲ್ಲಿ ಬಿಝಿಯಾಗಿದ್ದೇನೆ. ಯಾವುದೇ ಪಕ್ಷದ ಪರ ಪ್ರಚಾರಕ್ಕೆ ಬರುವುದಿಲ್ಲ ಎಂದು ಯಶ್ ಹೇಳಿದ್ದಾರೆ ಎಂದು ವರದಿಯಾಗಿದೆ.

    ಇದನ್ನೂ ಓದಿ: ಅಳಿಯನಿಗೆ ಕೈ ತಪ್ಪಿದ ಟಿಕೆಟ್‌; ಕಾಂಗ್ರೆಸ್​ಗೆ ಮಾವ ರಾಜೀನಾಮೆ!

    ಸುಮಲತಾ ಪರ ಪ್ರಚಾರಕ್ಕೆ ಬಂದಿದ್ದರು…

    ಯಶ್ ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಂಡ್ಯದಲ್ಲಿ ಸುಮಲತಾ ಪರ ಬಿರುಸಿನ ಪ್ರಚಾರ ನಡೆಸಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ ನಿಂತ ಸುಮಲತಾ ಗೆಲುವು ಸಾಧಿಸುವಲ್ಲಿ ಯಶ್ ಅವರ ಬಿರುಸಿನ ಪ್ರಚಾರ ಪ್ರಮುಖ ಪಾತ್ರ ವಹಿಸಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts