ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಇಂದು ತಮ್ಮ ಹುಟ್ಟುಹಬ್ಬ ಆಚರಿಸದ್ದಕ್ಕೆ ಅಭಿಮಾನಿಯೊಬ್ಬರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಹುಟ್ಟುಹಬ್ಬ ಆಚರಿಸದ ಕಾರಣ ಯಶ್ ಅವರ ಹೊಸಕೆರೆಹಳ್ಳಿ ಮನೆ ಮುಂಭಾಗದಲ್ಲಿ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಘಟನೆ ನಡೆಯುತ್ತಿದ್ದಂತೆ ಗಾಯಾಳು ರವಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಗಿರಿನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ!
ಕಳೆದ ವರ್ಷ ಡಿಸೆಂಬರ್ನಲ್ಲಿ ರೆಬೆಲ್ಸ್ಟಾರ್ ಅಂಬರೀಷ್ ಇಹಲೋಕ ತ್ಯಜಿಸಿದ್ದರಿಂದ ನನಗೆ ಹುಟ್ಟುಹಬ್ಬ ಆಚರಿಸಿಕೊಳ್ಳಲು ಇಷ್ಟವಿಲ್ಲ. ನನಗೆ ಗೊತ್ತು ಸಾಕಷ್ಟು ಅಭಿಮಾನಿಗಳು ಪ್ರೀತಿಯಿಂದ ನನ್ನ ಭೇಟಿ ಮಾಡಲು ಕಾಯುತ್ತಿದ್ದೀರ ಅಂತ. ಆದರೆ, ಅಂಬರೀಷ್ ಅವರಿಗೆ ಗೌರವ ಸೂಚಿಸುವ ಸಲುವಾಗಿ ನಾನು ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ರಾಕಿಂಗ್ ಸ್ಟಾರ್ ಯಶ್ ನಿನ್ನೆ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. (ದಿಗ್ವಿಜಯ ನ್ಯೂಸ್)