More

    ಕ್ರಿಕೆಟ್​ ದಿಗ್ಗಜನ ಹೆಸರಿನಲ್ಲಿರುವ ದಾಖಲೆಯನ್ನು ಸರಿಗಟ್ಟಲು ಸಜ್ಜಾದ ಯಶಸ್ವಿ ಜೈಸ್ವಾಲ್; ಏನದು?

    ನವದೆಹಲಿ: ಪ್ರವಾಸಿ ಇಂಗ್ಲೆಂಡ್​ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಟೀಮಗ್​ ಇಂಡಿಯಾ ಪರ ಉತ್ತಮ ಪ್ರದರ್ಶನ ನೀಡುವ ಮೂಲಕ ಭರವಸೆಯ ಆಟಗಾರ ಎನ್ನಿಸಿರುವ ಎಡಗೈ ಆರಂಭಿಕ ಯಶಸ್ವಿ ಜೈಸ್ವಾಲ್ ಹಾಲಿ ಸರಣಿಯಲ್ಲಿ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದೀಗ ಟೀಮ್ ಇಂಡಿಯಾ ಪರ ಸರ್ವಶ್ರೇಷ್ಠ ದಾಖಲೆ ಬರೆಯುವ ಹೊಸ್ತಿಲಲ್ಲಿ ಯಶಸ್ವಿ ಜೈಸ್ವಾಲ್ ಸಜ್ಜಾಗಿ ನಿಂತಿದ್ದಾರೆ.

    ಈಗಾಗಲೇ ಸರಣಿಯಲ್ಲಿ ಅತಿ ಹೆಚ್ಚು ರನ್​ ಸಿಡಿಸುವ ಮೂಲಕ ವಿರಾಟ್​ ಕೊಹ್ಲಿ ಹೆಸರಿನಲ್ಲಿರುವ ದಾಖಲೆಯನ್ನು ಸರಿಗಟ್ಟಿರುವ ಯಶಸ್ವಿ ಜೈಸ್ವಾಲ್ ಈಗ ದಿಗ್ಗಜ ಕ್ರಿಕೆಟಿಗ ಸುನೀಲ್​ ಗಾವಸ್ಕರ್​ ಅವರ ಹೆಸರಿನಲ್ಲಿರುವ ರೆಕಾರ್ಡ್​ ಬ್ರೇಕ್​ ಮಾಡಲು ಸಜ್ಜಾಗಿದ್ದಾರೆ.

    ಟೆಸ್ಟ್​ ಸರಣಿ ಒಂದರಲ್ಲಿ ಟೀಮ್ ಇಂಡಿಯಾ ಪರ ಅತಿ ಹೆಚ್ಚು ರನ್​ ಸಿಡಿಸಿದ ದಾಖಲೆ ದಿಗ್ಗಜ ಕ್ರಿಕೆಟಿಗ ಸುನೀಲ್​ ಗಾವಸ್ಕರ್​ ಹೆಸರಿನಲ್ಲಿದೆ. 1970-71 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಗಾವಸ್ಕರ್ 774 ರನ್ ಕಲೆಹಾಕಿದ್ದರು. ಈ ಮೂಲಕ ಟೀಮ್ ಇಂಡಿಯಾ ಪರ ಸರಣಿ ಒಂದರಲ್ಲಿ ಅತೀ ಹೆಚ್ಚು ರನ್ ಬಾರಿಸಿದ ದಾಖಲೆ ನಿರ್ಮಿಸಿದ್ದರು.

    Sunil Jaiswal kohli

    ಇದನ್ನೂ ಓದಿ: ಮಹಿಳೆ ಮಾತ್ರವಲ್ಲ, ಪುರುಷರ ಮೇಲೂ ನಡೆಯುತ್ತದೆ ಲೈಂಗಿಕ ದೌರ್ಜನ್ಯ: ಕೇರಳ ಹೈಕೋರ್ಟ್

    ಇದೀಗ ಯಶಸ್ವಿ ಜೈಸ್ವಾಲ್ ಈ ದಾಖಲೆಯ ಸನಿಹದಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೊದಲ 4 ಟೆಸ್ಟ್ ಪಂದ್ಯಗಳಲ್ಲಿ ಜೈಸ್ವಾಲ್ ಒಟ್ಟು 655 ರನ್ ಕಲೆಹಾಕಿದ್ದಾರೆ. ಧರ್ಮಶಾಲಾದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದಲ್ಲಿ 120 ರನ್ ಬಾರಿಸಿದರೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿರುವ ಸಾರ್ವಕಾಲಿಕ ದಾಖಲೆಯನ್ನು ಯಶಸ್ವಿ ಜೈಸ್ವಾಲ್ ತಮ್ಮದಾಗಿಸಿಕೊಳ್ಳಲಿದ್ದಾರೆ.

    ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿವೊಂದರಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಭಾರತೀಯ ಬ್ಯಾಟರ್​ನ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ 2017 ರಲ್ಲಿ 8 ಇನಿಂಗ್ಸ್​ಗಳಲ್ಲಿ 655 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದಾರೆ. ಇದೀಗ ಈ ದಾಖಲೆಯನ್ನು ಯಶಸ್ವಿ ಜೈಸ್ವಾಲ್ ಸರಿಗಟ್ಟಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 8 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಯಶಸ್ವಿ ಜೈಸ್ವಾಲ್ ಒಟ್ಟು 655 ರನ್ ಕಲೆಹಾಕಿದ್ದಾರೆ. ಈ ಮೂಲಕ 7 ವರ್ಷಗಳ ಹಿಂದೆ ವಿರಾಟ್ ಕೊಹ್ಲಿ ನಿರ್ಮಿಸಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

    ಇನ್ನು ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ 1 ರನ್ ಕಲೆಹಾಕಿದರೆ, ಆಂಗ್ಲರ ವಿರುದ್ಧ ಟೆಸ್ಟ್ ಸರಣಿಯೊಂದರಲ್ಲಿ ಅತ್ಯಧಿಕ ರನ್ ಬಾರಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಯಶಸ್ವಿ ಜೈಸ್ವಾಲ್ ಪಾಲಾಗಲಿದೆ. ಇದರ ಜೊತೆಗೆ ಸುನೀಲ್​ ಗಾವಸ್ಕರ್ ಹೆಸರಿನಲ್ಲಿರುವ ದಾಖಲೆಯನ್ನು ಯಶಸ್ವಿಯಾಗಿ ಜೈಸ್ವಾಲ್​ ಸರಿಗಟ್ಟಲಿದ್ದಾರ ಎಂದು ಕಾದು ನೋಡಬೇಕಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts