More

    ಬ್ಯಾಕ್​ ಟು ಬ್ಯಾಕ್​ ಶತಕ; ವಿರಾಟ್​ ಕೊಹ್ಲಿ ದಾಖಲೆ ಸರಿಗಟ್ಟಿದ ಯಶಸ್ವಿ ಜೈಸ್ವಾಲ್

    ರಾಜ್​ಕೋಟ್​: ಇಲ್ಲಿನ ನಿರಂಜನ್​ ಷಾ ಕ್ರಿಕೆಟ್​ ಮೈದಾನದಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್​ ನಡುವಿನ ಮೂರನೇ ಟೆಸ್ಟ್​ ಪಂದ್ಯ ಹಲವು ದಾಖಲೆಗಳಿಗೆ ಸಾಕ್ಷಿಯಾಗುತ್ತಿದ್ದು, ಈಗ ಮತ್ತೊಂದು ದಾಖಲೆಗೆ ಸಾಕ್ಷಿಯಾಗಿದೆ. ಪ್ರವಾಸಿ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಯುವ ಆರಂಭಿಕ ಯಶಸ್ವಿ ಜೈಸ್ವಾಲ್ ಸಿಡಿಲಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ಯಶಸ್ವಿ ಜೈಸ್ವಾಲ್ ವಿರಾಟ್ ಕೊಹ್ಲಿ ಹೆಸರಿನಲ್ಲಿರುವ ವಿಶೇಷ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.

    ಆರಂಭದಲ್ಲಿ ತಾಳ್ಮೆಯುತ ಬ್ಯಾಟಿಂಗ್​ ಆಡದಿ ಯಶಸ್ವಿ 80 ಎಸೆತಗಳಲ್ಲಿ ಅರ್ಧಶತಕವನ್ನು ಪೂರೈಸಿಕೊಂಡರು. ಅರ್ಧಶತಕ ಪೂರೈಸುತ್ತಿದ್ದಂತೆ ವೇಗದ ಆಟಕ್ಕೆ ಒತ್ತು ನೀಡಿದ ಜೈಸ್ವಾಲ್​ ಇಂಗ್ಲೆಂಡ್ ಬೌಲರ್​ಗಳ ಬೆಂಡತ್ತಲು ಆರಂಭಿಸಿದರು. ಪರಿಣಾಮ 122 ಎಸೆತಗಳಲ್ಲಿ ಭರ್ಜರಿ ಶತಕ ಪೂರೈಸಿದರು. ಈ ಶತಕದೊಂದಿಗೆ ಯಶಸ್ವಿ ಜೈಸ್ವಾಲ್ ವಿರಾಟ್ ಕೊಹ್ಲಿ ಹೆಸರಿನಲ್ಲಿರುವ ವಿಶೇಷ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.

    Yashasvi Jaiswal

    ಇದನ್ನೂ ಓದಿ: ನಾಯಕತ್ವ ಬಿಕ್ಕಟ್ಟು; ಕಾಂಗ್ರೆಸ್​ಗೆ​ ‘ಗುಡ್​ ಬೈ’ ಹೇಳಲಿದ್ದಾರಾ ಮಾಜಿ ಸಿಎಂ ಕಮಲ್​ನಾಥ್​

    ಈ ಶತಕದೊಂದಿಗೆ ಯಶಸ್ವಿ ಜೈಸ್ವಾಲ್ ಪ್ರಸ್ತುತ ಸರಣಿಯಲ್ಲಿ ಒಟ್ಟು 435 ರನ್ ಗಳಿಸಿದ್ದಾರೆ. ಇದರೊಂದಿಗೆ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿವೊಂದರಲ್ಲಿ 400+ ರನ್ ಕಲೆಹಾಕಿದ 2ನೇ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಜೈಸ್ವಾಲ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ  ವಿರಾಟ್ ಕೊಹ್ಲಿ. 2018ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಒಟ್ಟು 593 ರನ್ ಬಾರಿಸಿ ದಾಖಲೆ ಬರೆದಿದ್ದರು. ಇದಾದ ಬಳಿಕ ಯಾವುದೇ ಬ್ಯಾಟರ್​ಗೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ 400 ರನ್​ ಕಲೆಹಾಕಲು ಸಾಧ್ಯವಾಗಿರಲಿಲ್ಲ.

    ಇದೀಗ 6 ವರ್ಷಗಳ ಬಳಿಕ ಇಂಗ್ಲೆಂಡ್ ವಿರುದ್ಧ ಯಶಸ್ವಿ ಜೈಸ್ವಾಲ್ 400+ ರನ್ ಕಲೆಹಾಕಿದ್ದಾರೆ. ಈ ಮೂಲಕ ಆಂಗ್ಲರ ವಿರುದ್ಧದ ಸರಣಿಯಲ್ಲಿ ಕಿಂಗ್ ಕೊಹ್ಲಿ ಬಳಿಕ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ 2ನೇ ಬ್ಯಾಟ್ಸ್​​​ಮನ್ ಎಂಬ ವಿಶೇಷ ದಾಖಲೆಯೊಂದನ್ನು ಜೈಸ್ವಾಲ್ ತಮ್ಮದಾಗಿಸಿಕೊಂಡಿದ್ದಾರೆ. ಸ್ನಾಯು ಸೆಳೆತಕ್ಕೆ ಒಳಗಾದ ಜೈಸ್ವಾಲ್ ರಿಟೈರ್ಡ್​ ಹರ್ಟ್ ತೆಗೆದುಕೊಂಡರು. ಹೀಗಾಗಿ ಅವರು ನಾಲ್ಕನೇ ದಿನದಾಟದಲ್ಲಿ ಮತ್ತೆ ಕಣಕ್ಕಿಳಿಯುವ ಸಾಧ್ಯತೆಯಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts