More

    ಶತಕ ಸಿಡಿಸಿ ಮೊದಲ ದಿನವೇ ಮೂರು ದಾಖಲೆ ಬರೆದ ಯಶಸ್ವಿ ಜೈಸ್ವಾಲ್​

    ವಿಶಾಖಪಟ್ಟಣಂ: ಇಲ್ಲಿನ ವೈ.ಎಸ್​. ರಾಜಶೇಖರ್​ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್​ ವಿರುದ್ಧದ ಎರಡನೇ ಟೆಸ್ಟ್​ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್​​ ಶತಕದ ನೆರವಿನೊಂದಿಗೆ ಟೀಂ ಇಂಡಿಯಾ ಮೊದಲ ದಿನದಾಟದ ಅಂತ್ಯಕ್ಕೆ 93 ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 336 ರನ್​ ಗಳಿಸಿದೆ.

    ಮೊದಲ ದಿನದಾಟದ ಅಂತ್ಯಕ್ಕೆ ತಂಡಕ್ಕೆ ಆಸರೆಯಾಗಿರುವ ಯಶಸ್ವಿ ಜೈಸ್ವಾಲ್​ (179 ರನ್​, 257 ಎಸೆತ, 17 ಬೌಂಡರಿ, 5 ಸಿಕ್ಸರ್​) ಶತಕದ ನೆರವಿನೊಂದಿಗೆ ಮೂರು ದಾಖಲೆಗಳನ್ನು ಬರೆದಿದ್ದಾರೆ.

    ಮೊದಲ ದಿನದಾಟದಲ್ಲಿ ಅಜೇಯ 179 ರನ್ ಕಲೆಹಾಕಿರುವ ಜೈಸ್ವಾಲ್, ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನ ಮೊದಲ ದಿನದಾಟದಲ್ಲಿ ಅತಿ ಹೆಚ್ಚು ರನ್ ಕಲೆಹಾಕಿದ ಭಾರತದ 6ನೇ ಬ್ಯಾಟರ್​ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳನ್ನು ಪಡೆದುಕೊಂಡಿರುವ ಭಾರತದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್, 2004 ರಲ್ಲಿ ಪಾಕಿಸ್ತಾನದ ವಿರುದ್ಧ 228 ರನ್ ಕಲೆಹಾಕಿದ್ದರೆ, ಅದಕ್ಕೂ ಮುನ್ನ ಅಂದರೆ 2003 ರಲ್ಲಿ ಆಸ್ಟ್ರೇಲಿಯಾ ವಿರುದ್ಧ 195 ರನ್​ ಕಲೆ ಹಾಕಿದ್ದಾರೆ.

    Yashasvi Jaiswal

    ಇದನ್ನೂ ಓದಿ: ’12th ಫೇಲ್’​ ಯಶಸ್ಸಿನ ಬೆನ್ನಲ್ಲೇ ನಿವೃತ್ತಿ ಬಗ್ಗೆ ಮಾತನಾಡಿದ ನಾಯಕ ನಟ; ಕಾರಣ ಹೀಗಿದೆ

    ಶತಕದ ಇನ್ನಿಂಗ್ಸ್ ಆಡುವ ಮೂಲಕ ಜೈಸ್ವಾಲ್ ಮೊದಲ 10 ಟೆಸ್ಟ್ ಇನ್ನಿಂಗ್ಸ್‌ಗಳಲ್ಲಿ 500 ಪ್ಲಸ್ ರನ್ ಗಳಿಸಿದ 8ನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಜೈಸ್ವಾಲ್​ಗೂ ಮುನ್ನ ಸುನಿಲ್ ಗವಾಸ್ಕರ್, ವೀರೇಂದ್ರ ಸೆಹ್ವಾಗ್, ಮಯಾಂಕ್ ಅಗರ್ವಾಲ್, ರೋಹಿತ್ ಶರ್ಮಾ, ಶಿಖರ್ ಧವನ್, ದಿನೇಶ್ ಕಾರ್ತಿಕ್ ಮೊದಲ 10 ಇನ್ನಿಂಗ್ಸ್​ಗಳಲ್ಲಿ 500 ಕ್ಕೂ ಅಧಿಕ ರನ್ ಬಾರಿಸಿದ ಸಾಧನೆ ಮಾಡಿದ್ದಾರೆ.

    ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಒಂದೇ ದಿನದಲ್ಲಿ ಅತಿ ಹೆಚ್ಚು ರನ್ ಕಲೆಹಾಕಿದ ಭಾರತೀಯ ಆಟಗಾರರ ಪೈಕಿ ಯಶಸ್ವಿ ಜೈಸ್ವಾಲ್‌ ಜಂಟಿಯಾಗಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. ಜೈಸ್ವಾಲ್​ಗೂ ಮುನ್ನ ಇಂಗ್ಲೆಂಡ್ ವಿರುದ್ಧ 2016 ರಲ್ಲಿ 232 ರನ್ ಕಲೆಹಾಕಿದ್ದ ಕನ್ನಡಿಗ ಕರುಣ್ ನಾಯರ್ ಮೊದಲ ಸ್ಥಾನದಲ್ಲಿದ್ದರೆ, ಜಂಟಿ ಎರಡನೇ ಸ್ಥಾನದಲ್ಲಿ 1979 ರಲ್ಲಿ 179 ರನ್ ಸಿಡಿಸಿದ್ದ ಸುನಿಲ್ ಗವಾಸ್ಕರ್ ಇದ್ದಾರೆ. ಬರೋಬ್ಬರಿ 45 ವರ್ಷಗಳ ನಂತರ ಅಂದರೆ 2024 ರಲ್ಲಿ, ಯಶಸ್ವಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಒಂದು ದಿನದಲ್ಲಿ ಅಜೇಯ 179 ರನ್ ಗಳಿಸುವ ಮೂಲಕ ಗವಾಸ್ಕರ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts