More

    ಬಹುನಿರೀಕ್ಷಿತ ಯಶಸ್ವಿನಿ ಯೋಜನೆ ಮರು ಜಾರಿ ಯಾವಾಗ?: ಸಚಿವರೇ ಘೋಷಿಸಿದ್ರು ದಿನಾಂಕ..

    ಬೆಂಗಳೂರು: ಒಮ್ಮೆ ಸ್ಥಗಿತಗೊಳಿಸಲಾಗಿದ್ದ ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿಗೆ ತರುವುದಾಗಿ ಸರ್ಕಾರ ಈಗಾಗಲೇ ಘೋಷಣೆ ಮಾಡಿತ್ತು. ಆದರೆ ಯೋಜನೆ ಯಾವಾಗಿನಿಂದ ಮರು ಜಾರಿ ಆಗಲಿದೆ ಎಂಬ ಕುರಿತು ಇದೀಗ ಸಚಿವರು ದಿನಾಂಕವನ್ನು ಘೋಷಿಸಿದ್ದಾರೆ.

    ರಾಜ್ಯ ಸಹಕಾರ ಮಹಾಮಂಡಳ ಶನಿವಾರ ನಗರದಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಸಹಕಾರ ದಿನ ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಈ ಕುರಿತು ಮಾತನಾಡಿದರು. ಗ್ರಾಮೀಣ ಮತ್ತು ನಗರ ಸಹಕಾರಿಗಳಿಗೆ ಆರೋಗ್ಯ ರಕ್ಷಣೆಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಅಕ್ಟೋಬರ್ 2ರಿಂದ ಮರು ಜಾರಿಗೊಳಿಸುತ್ತೇವೆ, ಈ ಯೋಜನೆಯಡಿ ಲಕ್ಷಾಂತರ ಫಲಾನುಭವಿಗಳಿಗೆ ಲಾಭವಾಗಲಿದೆ ಎಂದು ಅವರು ಹೇಳಿದರು.

    ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆ ಕುರಿತು ಕೇಂದ್ರ ಹಣಕಾಸು ಸಚಿವರಿಗೆ ಈಗಾಗಲೇ ಪತ್ರ ಬರೆದಿದ್ದು, ಶೀಘ್ರದಲ್ಲೇ ಇದರ ಪ್ರಕ್ರಿಯೆಗಳು ಆರಂಭವಾಗಲಿದೆ. ಸಹಕಾರ ವಿಷಯದಲ್ಲಿ ಡಿಪ್ಲೊಮಾ ಶಿಕ್ಷಣ ಪಡೆದವರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಲು ಕಾಯ್ದೆ ತರಲು ಸರ್ಕಾರ ನಿರ್ಧರಿಸಿದೆ. ಈ ಕ್ಷೇತ್ರದ ಕುರಿತು ಹೆಚ್ಚು ಜ್ಞಾನ ಹೊಂದಿದವರಿಗೆ ವೃತಿಪರರ ನೇಮಕಾತಿ ಮಾಡಿಕೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ನಡೆಯಲಿರುವ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡಿಸಲಾಗುವುದು ಎಂದರು.

    ಗ್ರಾಮಸ್ಥರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಹೋದವನ ದುರಂತ ಸಾವು: ‘ಆಘಾತಕಾರಿ’ ಘಟನೆ..

    ‘ನಮಸ್ಕಾರ ದೇವರು’ ಅಂತ ಹೇಳೋದ್ಯಾಕೆ ಡಾಕ್ಟರ್​ ಬ್ರೋ?; ಹಣ ಬೇಕಾದಾಗ ಯಾವ ಹೋಟೆಲ್​ಗೆ ಹೋಗ್ತಾರೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts