ಯಶ್ ತಾಯಿ ನಿರ್ಮಾಣದ ಮೊದಲ ಸಿನಿಮಾ ಅನೌನ್ಸ್; ಹೀರೋ ಯಾರು ಗೊತ್ತಾ| Yash

yash
Published on

Yash| ರಾಕಿಂಗ್ ಸ್ಟಾರ್ ಯಶ್ ಅವರು ನಟ ಹಾಗೂ ನಿರ್ಮಾಪಕನಾಗಿ ಬ್ಯುಸಿಯಾಗಿದ್ದಾರೆ. ಇದೀಗ ಯಶ್ ಅವರ ತಾಯಿ ಪುಷ್ಪ ಅರುಣ್ ಕುಮಾರ್ ಅವರು ಸಿನಿಮಾ ನಿರ್ಮಾಣಕ್ಕೀಳಿದಿದ್ದು, ರಾಕಿ ಭಾಯ್ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಯಶ್ ಅಮ್ಮನ ಮೊದಲ ಪ್ರೊಡಕ್ಷನ್ ಸಿನಿಮಾದಲ್ಲಿ ಕರಾವಳಿ ನಟ ಪೃಥ್ವಿ ಅಂಬಾರ್ ನಟಿಸಲಿದ್ದಾರೆ. ಇನ್ನೂ ಅಕ್ಷಯ ತೃತೀಯ ದಿನವೇ ಸಿನಿಮಾದ ರಿಲೀಸ್ ಆಗಿದೆ.

ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ ಮೊದಲ ಸಿನಿಮಾ ‘ಕೊತ್ತಲವಾಡಿ’ ಅಕ್ಷಯ ತೃತೀಯ ದಿನವೇ ಅನೌನ್ಸ್ ಆಗಿದೆ. ಮಾಸ್ ಅವತಾರದಲ್ಲಿ ಪೃಥ್ವಿ ಅಂಬರ್ ಕಾಣಿಸಿಕೊಂಡಿದ್ದು ಫಸ್ಟ್ ಲುಕ್ ಮಸ್ತ್ ಆಗಿ ಕಾಣಿಸಿದೆ. ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ಹೊಸದೊಂದು ಸಿನಿಮಾ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅದಕ್ಕೆ PA Productions ಎಂಬ ಹೆಸರನ್ನು ಇಡಲಾಗಿದೆ.

ಯಶ್ ಅಪ್ಪ ಮತ್ತು ಅಮ್ಮನ ಹೆಸರಾದ P ಅಂದ್ರೆ ಪುಷ್ಪ A ಅಂದ್ರೆ ಅರುಣ್ ಕುಮಾರ್ ಎಂಬ ಹೆಸರನ್ನು ಈ ನಿರ್ಮಾಣ ಸಂಸ್ಥೆಗೆ ಇಡಲಾಗಿದೆ. ಯಶ್​ ತಂದೆ ಹಾಗೂ ತಾಯಿಯ ಹೆಸರಿನ ಈ ಪ್ರೊಡಕ್ಷನ್ ಹೌಸ್‌ ಮೂಲಕ ಚೊಚ್ಚಲ ಚಿತ್ರ ನಿರ್ಮಾಣವಾಗುತ್ತಿದೆ. ಅಕ್ಷಯ ತೃತೀಯ ದಿನವಾದ ಇಂದು ಚಿತ್ರತಂಡ ಟೈಟಲ್ ಹಾಗೂ ಫಸ್ಟ್ ಲುಕ್ ರಿಲೀಸ್ ಮಾಡಿದೆ.

ಕನ್ನಡದ ಖ್ಯಾತ ನಾಯಕ ಪೃಥ್ವಿ ಅಂಬರ್ ಈ ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿದ್ದು, ಕಿರುತೆರೆ ನಟಿ ಕಾವ್ಯಾ ಶೈವ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗರಂತಹ ಅನುಭವಿ ತಾರಾಬಳಗ ಚಿತ್ರದಲ್ಲಿದೆ. ಇಲ್ಲಿಯವರೆಗೂ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೃಥ್ವಿ ಕೊತ್ತಲವಾಡಿಯಲ್ಲಿ ಕಂಪ್ಲೀಟ್ ಮಾಸ್ ಗೆಟಪ್ ತೊಟ್ಟಿದ್ದಾರೆ. ಫಸ್ಟ್ ಲುಕ್ ಪೋಸ್ಟರ್​ನಲ್ಲಿ ಪೃಥ್ವಿ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net