ಯಥಾಭವ ಟೀಸರ್; ಗೌತಮ್ ಬಸವರಾಜು ನಿರ್ದೇಶನದ ಕೋರ್ಟ್ ಡ್ರಾಮಾ

yathabhava
Published on

ಬೆಂಗಳೂರು:ಗೌತಮ್ ಬಸವರಾಜು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಚಿತ್ರ ‘ಯಥಾಭವ’. ಪವನ್ ಶಂಕರ್ ನಾಯಕನಾಗಿರುವ ಈ ಚಿತ್ರಕ್ಕೆ ಸಹನಾ ಸುಧಾಕರ್ ನಾಯಕಿಯಾಗಿದ್ದಾರೆ.

ಆ.25ರ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮದಲ್ಲಿ ಚಿತ್ರತಂಡ ಟೀಸರ್ ಬಿಡುಗಡೆ ಮಾಡಲು ಮುಂದಾಗಿದೆ. ಇದೊಂದು ಕೋರ್ಟ್ ಡ್ರಾಮಾ ಜಾನರ್ ಚಿತ್ರವಾಗಿದ್ದು, ಹಿರಿಯ ನಟ ರಾಕ್‌ಲೈನ್ ಸುಧಾಕರ್ ಪುತ್ರ ಗೌತಮ್ ಸುಧಾಕರ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜತೆಗೆ ದತ್ತಣ್ಣ, ಬಾಲರಾಜವಾಡಿ, ಗೋಪಾಲಕೃಷ್ಣ ದೇಶಪಾಂಡೆ, ಮಾಸ್ಟರ್ ಶಮಂತ್, ನೀನಾಸಂ ಆನಂದ್, ಉಮಾ ಹೆಬ್ಬಾರ್, ಮಹೇಶ್ ಕಾಳಿ ಪ್ರಮುಖ ತಾರಾಗಣದಲ್ಲಿದ್ದಾರೆ.

ಉಳಿದಂತೆ ಹರ್ಷ್ ಮಿಶ್ರ ಛಾಯಾಗ್ರಹಣ, ಹರೀಶ್ ಚೌಧರಿ ಸಂಕಲನ, ಕುಂಗ್‌ೂ ಚಂದ್ರು ಸಾಹಸ ನಿರ್ದೇಶನ, ಸುಚಿತ್ ಚೌಹಾಣ್ ನೃತ್ಯ ನಿರ್ದೇಶನ, ಸ್ಮಿತಾ ಕುಲಕರ್ಣಿ ಕಲಾ ನಿರ್ದೇಶನ ಚಿತ್ರಕ್ಕಿರಲಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಉತ್ಸವ್ ಶ್ರೇಯಸ್ ಸಂಗೀತ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net