More

    ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ಸ್ಕೀಮ್​ ರದ್ದಾಗುತ್ತಾ? ಯತೀಂದ್ರ ಸಿದ್ದರಾಮಯ್ಯ ಹೊಸ ಬಾಂಬ್​

    ಹಾಸನ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ​ ಅಧಿಕಾರದ ಗದ್ದುಗೆ ಏರಲು ಗ್ಯಾರಂಟಿ ಯೋಜನೆಗಳ ಘೋಷಣೆಗಳು ಮಹತ್ವದ ಪಾತ್ರ ವಹಿಸಿರುವುದನ್ನು ತಳ್ಳಿಹಾಕುವಂತಿಲ್ಲ. ಅಧಿಕಾರಕ್ಕೆ ಬಂದ ಕೂಡಲೇ ಸರ್ಕಾರ ಗ್ಯಾರಂಟಿಗಳನ್ನು ಈಡೇರಿಸಿದೆ. ಆದರೆ, ಈ ಯೋಜನೆಗಳು ಲೋಕಸಭಾ ಚುನಾವಣೆವರೆಗೆ ಮಾತ್ರ ಎಂಬ ಮಾತುಗಳು ಕೇಳಿಬರುತ್ತಿವೆ. ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಆಡಿರುವ ಮಾತುಗಳು ಸಾಕಷ್ಟು ಕುತೂಹಲ ಮೂಡಿಸಿದೆ.

    ಸಿದ್ದರಾಮಯ್ಯ ಅವರೇ ಮುಂದಿನ ಐದು ವರ್ಷ ಸಿಎಂ ಆಗಿರಲಿದ್ದಾರೆ ಎಂಬ ಕೂಗು ಮತ್ತೆ ಕೇಳಿಬಂದಿದೆ. ಈ ಬಾರಿ ಯತೀಂದ್ರ ಅವರು ತಮ್ಮ ತಂದೆಯ ಪರ ಬ್ಯಾಟ್​ ಬೀಸಿದ್ದಾರೆ. ಈ ಮೂಲಕ ಸಿಎಂ ಬದಲಾವಣೆ ಚರ್ಚೆಗೆ ಮತ್ತೊಮ್ಮೆ ಕಿಡಿ ಹೊತ್ತಿಸಿದ್ದಾರೆ.

    ಹಾಸನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಯತೀಂದ್ರ, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮುಂಬರುವ ಲೋಕಸಭಾ ಚುನಾವಣೆ ಎದುರಿಸಬೇಕಿದೆ. ನೀವೆಲ್ಲರು ಸಿದ್ದರಾಮಯ್ಯಗೆ ಬೆಂಬಲ ನೀಡಬೇಕು. ಕಾಂಗ್ರೆಸ್​ ಹೆಚ್ಚು ಸ್ಥಾನಗಳನ್ನು ಗೆದ್ದರೆ ಯಾವುದೇ ಅಡೆತಡೆ ಇಲ್ಲದೆ ಸಿದ್ದರಾಮಯ್ಯ ಅವರೇ ಮುಂದಿನ 5 ವರ್ಷ ಸಿಎಂ ಆಗಿರುತ್ತಾರೆ. ಹಾಗಾಗಿ ನಾವೆಲ್ಲ ಸಿದ್ದರಾಮಯ್ಯ ಅವರನ್ನು ಬೆಂಬಲಿಸೋಣ ಎಂದು ಕರೆ ನೀಡಿದ್ದಾರೆ.

    ಚುನಾವಣೆಗೂ ಮುನ್ನವೇ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದು, ನಿಮಗೆಲ್ಲರಿಗೂ ಗೊತ್ತಿದೆ. ಇದೀಗ ಸರ್ಕಾರ ಬಂದು ಹಲವು ತಿಂಗಳುಗಳು ಕಳೆದಿವೆ. ಸರ್ಕಾರಕ್ಕೆ ಒಂದು ವರ್ಷ ತುಂಬುವಷ್ಟರಲ್ಲೇ ನಾವು ಐದೂ ಗ್ಯಾರಂಟಿಯನ್ನು ಜಾರಿ ಮಾಡಿದ್ದೇವೆ. ನಾವು ಬಡವರು ಮತ್ತು ಶೋಷಿತರ ಪರ ಇದ್ದೇವೆ. ಗ್ಯಾರಂಟಿ ಸ್ಕೀಮ್​ಗಳಿಗೆ ವರ್ಷಕ್ಕೆ 50 ಕೋಟಿ ರೂ. ಹೆಚ್ಚು ಹಣ ಮೀಸಲಿಡಬೇಕಿದೆ. ಇದರೊಂದಿಗೆ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕಿದೆ. ಇದೆಲ್ಲದರ ನಡುವೆಯೂ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಕೊಂಡು ಬರಲಾಗುತ್ತಿದೆ ಎಂದರು.

    ಗ್ಯಾರೆಂಟಿ ಸ್ಕೀಮ್​ಗಾಗಿ ಸಿದ್ದರಾಮಯ್ಯ ಬೆಂಬಲಿಸಿ
    ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್​ ಗೆದ್ದರೆ ಸಿದ್ದರಾಮಯ್ಯ ಅವರಿಗೆ ನೈತಿಕ ಬೆಂಬಲ ದೊರೆಯಲಿದೆ. ಆಗ ಐದು ವರ್ಷಗಳ ಕಾಲ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ. ಆಗ 5 ವರ್ಷಗಳ ಕಾಲ ಗ್ಯಾರೆಂಟಿ ಸ್ಕೀಮ್ ಅನ್ನು​ ಮುಂದುವರಿಸುತ್ತಾರೆ. ಹೀಗಾಗಿ ನಾವೆಲ್ಲರೂ ಸಿದ್ದರಾಮಯ್ಯ ಅವರಿಗೆ ಬೆಂಬಲವಾಗಿ ನಿಲ್ಲೋಣ ಎಂದು ತಿಳಿಸಿದರು.

    ಇದೀಗ ಯತೀಂದ್ರ ಹೇಳಿಕೆ ಭಾರಿ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಹಾಗಾದರೆ ಲೋಕಸಭಾ ಚುನಾವಣೆ ಬಳಿಕ ಉಚಿತ ಗ್ಯಾರಂಟಿ ಯೋಜನೆಗಳು ರದ್ದಾಗುತ್ತಾ ಎಂಬ ಮಾತುಗಳು ಸಹ ಕೇಳಿಬರುತ್ತಿವೆ. ಇನ್ನೊಂದಡೆ ಐದು ವರ್ಷ ಸಿಎಂ ವಿಚಾರವನ್ನು ಪ್ರಸ್ತಾಪಿಸಿ, ಕಾಂಗ್ರೆಸ್​ ವಲಯದಲ್ಲಿ ಮತ್ತೊಂದು ಸುತ್ತಿನ ವಾಗ್ವಾದಕ್ಕೆ ಯತೀಂದ್ರ ಚಾಲನೆ ನೀಡಿದ್ದಾರೆ.

    ಮೊದಲ ಬಾರಿಗೆ ಕೂಚ್ ಬೆಹಾರ್ ಟ್ರೋಫಿ ಜಯಿಸಿದ ಕರ್ನಾಟಕ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    ಪಾಕಿಸ್ತಾನದ ಮೇಲೆಯೇ ಕ್ಷಿಪಣಿ ಉಡಾಯಿಸಿದ ಇರಾನ್​: ಪರಿಣಾಮ ನೆಟ್ಟಗಿರಲ್ಲ ಎಂದ ಪಾಕ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts