ಖಡ್ಗ ಪ್ರದರ್ಶಿಸಿ ಯತ್ನಾಳ್​ ಗೆಲುವು ಸಂಭ್ರಮಿಸಿದ ಬೆಂಬಲಿಗ!

yatnal follower
Published on

ವಿಜಯಪುರ: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್​ ಪಕ್ಷವು ಪ್ರಚಂಡ ದಿಗ್ವಿಜಯ ಸಾಧಿಸಿದೆ.

ಇನ್ನು ವಿಜಯಪುರದಲ್ಲಿ ಬಿಜೆಪಿಯಿಂದ ಪುನರಾಯ್ಕೆಯಾದ ಶಾಸಕ ಬಸನ್​ಗೌಡ ಪಾಟೀಲ್​ ಯತ್ನಾಳ್​ ಬೆಂಬಲಿಗರ ಸಂಭ್ರಮಾಚರಣೆ ವೇಳೆ ಮುಖಂಡನೊಬ್ಬ ತಲ್ವಾರ್​ ಹಿಡಿದು ರಸ್ತೆ ತುಂಬಾ ಓಡಾಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ನಿಷೇಧಾಜ್ಞೆ ಹೊರತಾಗಿಯೂ ಸಂಭ್ರಮಾಚರಣೆ

ಶನಿವಾರ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳುವ ಬೆನ್ನಲ್ಲೇ ಅಹಿತಕರ ಘಟನೆಗಳು ನಡೆಯದಿರಲಿ ಎಂಬ ಕಾರಣಕ್ಕೆ ನಗರದಾದ್ಯಂತ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿತ್ತು.

Capture1

ಚುನಾವಣಾ ಅಧಿಕಾರಿಗಳು ಯತ್ನಾಳ್​ ಗೆಲುವನ್ನು ಘೋಷಿಸಿದ ಬೆನ್ನಲ್ಲೇ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ನಗರದ ಸಿದ್ದೇಶ್ವರ ಸ್ವಾಮಿ ದೇವಾಲಯದ ಬಳಿ ಜಮಾಯಿಸಿದ್ದರು.

ಖಡ್ಗ ಪ್ರದರ್ಶನ

ವಿಜಯಪುರ ನಗರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗೆಲುವು ಸಾಧಿಸುತ್ತಿದಂತೆ ವಿಜಯೋತ್ಸವ ನಡೆಯಿತು.

ಈ ವೇಳೆ ಕಾರ್ಯಕರ್ತ ಖಡ್ಗ ಪ್ರದರ್ಶನ ಮಾಡುವ ಮೂಲಕ ಅಸಭ್ಯ ವರ್ತನೆ ಮಾಡಿದ್ದಾನೆ. ಅಲ್ಲದೇ, ಕೈಯಲ್ಲಿ ಖಡ್ಗ ಹಿಡಿದುಕೊಂಡು ಪ್ರದರ್ಶನ ಮಾಡಿದ್ದಾನೆ.

ಯಾವುದೇ ಕ್ರಮವಿಲ್ಲ

ಇನ್ನು ಗಾಂಧಿ ಚೌಕ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಪೊಲೀದರು ಇದುವರೆಗೂ ವ್ಯಕ್ತಿಯ ವಿರುದ್ಧ ಯಾವುದೇ ಕ್ರಮ ಜರುಗಿಸದೆ ಇರುವುದು ಚರ್ಚೆಗೆ ಕಾರಣವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net