More

    ಯತ್ನಾಳರನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ – ಎಂ.ಬಿ. ಪಾಟೀಲ

    ವಿಜಯಪುರ:ಯತ್ನಾಳರನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ ಅವರು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ವಿರುದ್ಧ ವಿನಾಕಾರಣ ಟೀಕೆ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ತಮ್ಮ ಪಕ್ಷದ ನಾಯಕರ ವಿರುದ್ಧವೂ ಮಾತನಾಡಿದ್ದಾರೆ. ಹೀಗಾಗಿ ಅವರನ್ನು ಗಂಭೀರವಾಗಿ ಪರಿಗಣಿಸುವ ಅವಶ್ಯಕತೆ ಇಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಹೇಳಿದರು.

    ವಿಜಯಪುರ ನಗರ ವಿಧಾನ ಸಭೆ ಕ್ಷೇತ್ರದಲ್ಲಿ ಶುಕ್ರವಾರ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ಯತ್ನಾಳ ಅವರು ಯಡಿಯೂರಪ್ಪ, ಪ್ರಲ್ಹಾದ ಜೋಶಿ ಸೇರಿದಂತೆ ತಮ್ಮ ಪಕ್ಷದ ನಾಯಕರ ವಿರುದ್ಧವೂ ಮಾತನಾಡಿದ್ದಾರೆ. ಸಿಎಂ ಸ್ಥಾನ 2500 ಕೋಟಿ ರೂ. ಗಳಿಗೆ ಮಾರಾಟಕ್ಕಿದೆ ಎಂದೂ ಹೇಳಿದ್ದರು.

    ಕಳೆದ ಐದು ವರ್ಷದಲ್ಲಿ ಅವರು ಏನು ಮಾತನಾಡಿದ್ದಾರೆ ಎಂಬುದನ್ನು ತಿಳಿದುಕೊಳ್ಳಬೇಕು. ಇವರನ್ನು ಗಂಭಿರವಾಗಿ ಪರಿಗಣಿಸುವ ಅವಶ್ಯಕತೆ ಇಲ್ಲ ಎಂದರು.

    ಕಾಂಗ್ರೆಸ್ ಜನರ ಕಲ್ಯಾಣಕ್ಕಾಗಿ ನಾನಾ ಅಭಿವೃದ್ಧಿ ಯೋಜನೆಗಳನ್ನು ರೂಪಿಸಿದರೆ ಬಿಜೆಪಿ ಹಿಜಾಬ್, ಹಲಾಲ್, ಅಜಾನ್ ಹೀಗೆ ಮುಂತಾದ ಭಾವನಾತ್ಮಕ ವಿಷಯಗಳನ್ನು ಪ್ರಸ್ತಾಪಿಸುತ್ತ ಭಾವನೆಗಳನ್ನು ಕೆರಳಿಸುತ್ತಿದೆ. ಜನ ವಿರೋಧಿ, ರೈತ ವಿರೋಧಿ ಮತ್ತು ದಲಿತ ವಿರೋಧಿ ನೀತಿಯನ್ನು ಬಿಜೆಪಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.

    ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್‌ಹಮೀದ್ ಮುಶ್ರೀಫ್‌ಗೆ ಮತ ಹಾಕಿದರೆ ಅದು ನನಗೆ ಮತ ಹಾಕಿದಂತೆ ಎಂದ ಎಂ.ಬಿ. ಪಾಟೀಲ, ವಿಜಯಪುರ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಎಂ. ಬಿ. ಪಾಟೀಲ ಅವರು, ಕಳೆದ ಬಾರಿ ಹಲವಾರು ಮತಗಟ್ಟೆಗಳಲ್ಲಿ ಮತದಾನ ಪ್ರಮಾಣ ಕಡಿಮೆಯಾಗಿದ್ದರಿಂದ ಮುಶ್ರೀಫ್ ಸೋಲಬೇಕಾಯಿತು. ಈ ಬಾರಿ ಮತದಾನ ಪ್ರಮಾಣ ಹೆಚ್ಚಾಗಬೇಕು ಎಂದರು.

    ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ ಮಾತನಾಡಿ, ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ರೈತರು, ಮಹಿಳೆಯರು, ದೀನ ದಲಿತರು, ಯುವಕರು ಮತ್ತು ಮಕ್ಕಳ ಕಲ್ಯಾಣಕ್ಕೆ ಯೋಜನೆ ರೂಪಿಸದ ಬಿಜೆಪಿ ಸರ್ಕಾರ ವೃಥಾ ಕಾಲಹರಣ ಮಾಡುತ್ತಿದೆ ಎಂದು ಹೇಳಿದರು.

    ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಮಾತನಾಡಿದರು. ಡಾ. ಗಂಗಾಧರ ಸಂಬಣ್ಣಿ, ಸಂಗಮೇಶ ಬಬಲೇಶ್ವರ, ಕಾಂತಾ ನಾಯಕ, ರಾಕೇಶ ಕಲ್ಲೂರ, ಟಪಾಲ ಇಂಜನಿಯರ್, ಅಬ್ದುಲರಜಾಕ ಹೊರ್ತಿ, ಸುರೇಶ ಗೊಣಸಗಿ, ವೈಜನಾಥ ಕರ್ಪೂರಮಠ, ಸಜ್ಜಾದೆಪೀರಾ ಮುಶ್ರೀಫ್, ಅಡಿವೆಪ್ಪ ಸಾಲಗಲ್ಲ, ಜಮೀರ ಬಕ್ಷಿ, ಆರತಿ ಶಹಾಪುರ, ಸಿ.ಆರ್. ತೊರವಿ, ಚಂದ್ರಕಾಂತ ಶೆಟ್ಟಿ, ನಬಿಲಾಲ ಶಾನವಾಲೆ, ಆಶಿಫ ಶಾನವಾಲೆ, ಸುರೇಶಗೌಡ ಪಾಟೀಲ, ಆಜಾದ ಪಟೇಲ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts