More

    ಕುಟುಂಬ ರಾಜಕಾರಣದಿಂದಲೇ ಯಾವಗಲ್ ಸೋಲು

    ನರಗುಂದ: ಕುಟುಂಬ ರಾಜಕಾರಣದಿಂದಲೇ ನರಗುಂದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಆರ್. ಯಾವಗಲ್ ಸೋತಿದ್ದಾರೆ. ಸೋಲು ಅವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಸೋಲನ್ನು ಮತ್ತೊಬ್ಬರ ಮೇಲೆ ಹೊರಿಸಲು ನನ್ನ ವಿರುದ್ಧ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಡಾ. ಸಂಗಮೇಶ ಕೊಳ್ಳಿಯವರ ತಿರುಗೇಟು ನೀಡಿದ್ದಾರೆ.

    ಪಟ್ಟಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಬಿಜೆಪಿ ಜತೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದೇನೆ. ಗದಗ ಮತಕ್ಷೇತ್ರದ ಬಿಜೆಪಿ ಟಿಕೆಟ್‌ಗಾಗಿ ಮಾಜಿ ಸಚಿವ ಸಿ.ಸಿ. ಪಾಟೀಲ ಬಳಿಗೆ ಹೋಗಿದ್ದೆ’ ಎಂಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ ಯಾವಗಲ್ ಅವರ ಹೇಳಿಕೆ ಸತ್ಯಕ್ಕೆ ದೂರವಾಗಿದೆ. ಅವರು ಸಾಕ್ಷಿಗಳಿದ್ದರೆ ಬಹಿರಂಗಪಡಿಸಲಿ. ಬಿ.ಆರ್. ಯಾವಗಲ್ ಅವರು 2018, 2023ರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಇದರ ನೈತಿಕ ಹೊಣೆ ಹೊತ್ತು ನರಗುಂದದ ಪ್ರವೀಣ ಯಾವಗಲ್ ಹಾಗೂ ಹೊಳೆಆಲೂರಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಣ್ಣ ಕೊಳ್ಳೇರಿ ಇಬ್ಬರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು. ನರಗುಂದ ಮತಕ್ಷೇತ್ರದ ಜನತೆ ಕುಟುಂಬ ರಾಜಕಾರಣವನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದರು.

    ಬಿ.ಆರ್. ಯಾವಗಲ್ ಅವರ ಪುತ್ರ ವಿವೇಕ ಯಾವಗಲ್ ಫೇಸ್‌ಬುಕ್‌ನಲ್ಲಿ ತಮ್ಮ ಪೋಸ್ಟ್ ಅನ್ನು ಸಿ.ಸಿ. ಪಾಟೀಲ ಅವರಿಗೆ ಟ್ಯಾಗ್ ಮಾಡಿದ್ದಾರೆ. ಯಾರು ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂಬುದನ್ನು ಮತದಾರರು ಗಮನಿಸುತ್ತಿದ್ದಾರೆ. ಜನರಿಂದ ಬುದ್ಧಿ ಹೇಳಿಸಿಕೊಳ್ಳುವ ಬದಲು ಬಿ.ಆರ್. ಯಾವಗಲ್ ಸೋಲಿನ ಹೊಣೆ ಹೊತ್ತು ಎರಡೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ರಾಜೀನಾಮೆ ಸಲ್ಲಿಸಿ, ಬೇರೆಯವರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts