More

    ವರ್ಷ ಕಳೆದರೂ ಸ್ಪಂದಿಸದ ಸರ್ಕಾರ

    ಬೆಳಗಾವಿ: ಕಳೆದ ವರ್ಷ ಸಂಭವಿಸಿದ್ದ ಪ್ರವಾಹದಲ್ಲಿ ಹಾನಿಗೊಂಡ ಬೆಳೆಗಳಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಕಾಗವಾಡ ತಾಲೂಕಿನ ಉಗಾರ ಖುರ್ದು ಗ್ರಾಮದ ರೈತರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

    ಕಳೆದ ವರ್ಷದ ಮುಂಗಾರು ಹಂಗಾಮಿನಲ್ಲಿ ಸಂಭವಿಸಿದ್ದ ಕೃಷ್ಣಾ ನದಿ ಪ್ರವಾಹದಿಂದಾಗಿ ಸಾವಿರಾರು ಎಕರೆ ಭೂಮಿಯಲ್ಲಿ ಬೆಳೆಯಲಾಗಿದ್ದ ಬೆಳೆಗಳು ಜಲಾವೃತಗೊಂಡು ಸಂಪೂರ್ಣ ನಾಶವಾಗಿತ್ತು. ಆದರೆ, ವರ್ಷ ಕಳೆದರೂ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ಬಂದಿಲ್ಲ. ಅಲ್ಲದೆ, ಮನೆಗಳಿಗೆ ಸಮರ್ಪಕವಾಗಿ ಪರಿಹಾರ ನೀಡುವಲ್ಲಿಯೂ ಅಧಿಕಾರಿಗಳು ತಾರತಮ್ಯ ಮಾಡಿದ್ದಾರೆ ಎಂದು ಆರೋಪಿಸಿದರು.

    ಕಳದ ವರ್ಷ ಪ್ರವಾಹದಿಂದ ಹಾನಿಯಾಗಿದ್ದ ಬೆಳೆಗಳನ್ನು ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಸಮೀಕ್ಷೆ ನಡೆಸಿದ್ದರು. ಆದರೆ, ಈವರೆಗೂ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ. ಈ ವಿಚಾರವಾಗಿ ತಹಸೀಲ್ದಾರ್ ಅವರಿಗೆ ಐದಾರು ಬಾರಿ ಮನವಿ ಮಾಡಿಕೊಂಡಿದ್ದರೂ ಪರಿಹಾರ ದೊರೆತಿಲ್ಲ. ತಾಂತ್ರಿಕ ಸಮಸ್ಯೆಯಿಂದಾಗಿ ಪರಿಹಾರ ನೀಡಲು ವಿಳಂಬವಾಗುತ್ತಿದೆ ಎಂದು ನೆಪಹೇಳುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಪ್ರತಿಭಟನೆಯಲ್ಲಿ ಉಮೇಶ ಸನದಿ, ಶಾಂತಿನಾಥ ಕಾಳೆ, ವಿರೂಪಾಕ್ಷ ನಾವಿ, ನಂದಕುಮಾರ ಜಾಧವ, ಮಲ್ಲಪ್ಪ ಕಾಗೆ, ಅಶೋಕ ಜಯಪಾಲ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts