More

    ಕೆಲಸಕ್ಕೆ ಬಾರದ ಹಾಪ್‌ಕಾಮ್ಸ್ ನೌಕರರ ಮೇಲೆ ಯಡಿಯೂರಪ್ಪ ಗರಂ

    ಬೆಂಗಳೂರು: ರಾಜ್ಯದ 550 ಹಾಪ್‌ಕಾಮ್ಸ್ ಮಳಿಗೆಗಳ ಪೈಕಿ ಕೇವಲ 250 ಮಳಿಗೆಗಳು ಕಾರ್ಯ ನಿರ್ವಹಿಸುತ್ತಿರುವುದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಸಮಾಧಾನಕ್ಕೆ ಕಾರಣವಾಗಿದೆ.

    ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ, ಹಾಪ್ ಕಾಮ್ಸ್ ಮಳಿಗೆ ತೆರೆಯದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಜತೆಗೆ ಕೋವಿಡ್ ಸಂದರ್ಭದಲ್ಲಿ 150ಕ್ಕೂ ಹೆಚ್ಚು ನೌಕರರು ಕೆಲಸಕ್ಕೆ ಹಾಜರಾಗಿಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.

    ಇದನ್ನೂ ಓದಿ   ‘ಹೆಂಡತಿ ಜತೆ ಚೆನ್ನಾಗಿ ಬಾಳು, ಕೆಲಸಕ್ಕೆ ಹೋಗು’ ಅಂತ ಅಪ್ಪ-ಅಮ್ಮ ಹೇಳಿದ್ದಕ್ಕೆ ಈ ಮಗ ಏನು ಮಾಡಿದ ನೋಡಿ…

    ಕೃಷಿ ಹಾಗೂ ತೋಟಗಾರಿಕೆ ಇಲಾಖೆಯಿಂದ ಬೇರೆ ಇಲಾಖೆಗಳಿಗೆ ನಿಯೋಜನೆ ಮೇಲೆ ತೆರಳಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಮಾತೃ ಇಲಾಖೆಗೆ ವಾಪಸ್ಸು ಕರೆಸಿಕೊಳ್ಳಲು ಇಲಾಖೆ ಮುಖ್ಯಸ್ಥರಿಗೆ ಮುಖ್ಯಮಂತ್ರಿ ಸೂಚಿಸಿದರು. ಜತೆಗೆ ಕೋವಿಡ್ ಸಂದರ್ಭದಲ್ಲಿ ಕೆಲಸಕ್ಕೆ ಹಾಜರಾಗದೆ ಕೈಕೊಟ್ಟ ನಾನಾ ಇಲಾಖೆಗಳ ಸಿಬ್ಬಂದಿಯ ಬಗ್ಗೆಯೂ ಯಡಿಯೂರಪ್ಪ ಸಿಟ್ಟಾಗಿ, ಕ್ರಮಕ್ಕೆ ಆದೇಶಿಸಿದರು.

    ಕಳೆದ ಸಾಲಿನಲ್ಲಿ ಹೆಚ್ಚುವರಿ ಕೃಷಿ ಬಿತ್ತನೆ ಬೀಜವನ್ನು ಖರೀದಿಸಿ ರೈತರಿಗೆ ವಿತರಿಸಲಾಗಿತ್ತು. ಈ ಬಾರಿಯೂ ವಿತರಿಸಬೇಕೆಂದು ರೈತರು ಒತ್ತಾಯಿಸುತ್ತಿದ್ದಾರೆ ಎಂಬ ವಿಚಾರದ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಯಿತು.

    ಮೃತ ಸ್ನೇಹಿತನ ಮನೆ ಕಟ್ಟಿ.. ಅಲ್ಲೇ 11 ದಿನದ ಪುಣ್ಯತಿಥಿ ನೆರವೇರಿಸಿದ ಯುವಕರ ಸಾಹಸಗಾಥೆ ಇದು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts