17.8 C
Bengaluru
Wednesday, January 22, 2020

ಯಡಿಯೂರಪ್ಪ ಮುಂದಿದೆ ಸ್ಥಿರ ಸರ್ಕಾರ ನೀಡುವ ಸವಾಲು

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

| ರುದ್ರಣ್ಣ ಹರ್ತಿಕೋಟೆ ಬೆಂಗಳೂರು

ರಾಜ್ಯದ 15 ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಈಗ ಸ್ಥಿರ ಸರ್ಕಾರ ನೀಡುವ ಸವಾಲು ಎದುರಾಗಿದೆ.

ಅನರ್ಹ ಶಾಸಕರನ್ನು ಜನತಾ ನ್ಯಾಯಾಲಯದಲ್ಲಿ ಸ್ಥಿರ ಸರ್ಕಾರದ ಬಗ್ಗೆಯೇ ಪ್ರಚಾರ ಮಾಡಿ ಗೆಲ್ಲಿಸಿಕೊಂಡು ಬಂದ ಬಿಎಸ್​ವೈ ಮುಂದೆ ಈಗ ರಾಜಕೀಯ ಜಂಜಾಟಗಳಿಲ್ಲ. ಪಕ್ಷದಲ್ಲಿಯೂ ಪ್ರಬಲರಾಗಿದ್ದಾರೆ. ಸಣ್ಣಪುಟ್ಟ ಗೊಂದಲಗಳಿದ್ದರೂ, ಅವುಗಳನ್ನು ಬಗೆಹರಿಸಿಕೊಳ್ಳುವ ಮೂಲಕ ಆಡಳಿತವನ್ನು ಸರಿದಾರಿಗೆ ತೆಗೆದುಕೊಂಡು ಹೋಗಬೇಕಾಗಿದೆ.

ರಾಜ್ಯದಲ್ಲಿ ಸ್ಥಿರ ಸರ್ಕಾರವಿದೆ ಎಂಬ ಭಾವನೆ ಬರಬೇಕಾದರೆ ಸರ್ಕಾರದ ಯೋಜನೆಗಳ ಫಲ ಜನರಿಗೆ ಸಿಕ್ಕುವುದರೊಂದಿಗೆ, ಕಡತಗಳ ವಿಲೇವಾರಿ ಚುರುಕಾಗಬೇಕು, ಸರ್ಕಾರಿ ನೌಕರರು ಜನರ ಸಮಸ್ಯೆಗಳಿಗೆ ಸ್ಪಂದಿಸುವಂತಾಗಬೇಕು. ಸಂಪನ್ಮೂಲ ಕ್ರೋಡೀಕರಣ ಹೆಚ್ಚಾಗಿ ಅಭಿವೃದ್ಧಿ ಕಾರ್ಯಕ್ರಮ ಕಣ್ಣಿಗೆ ಕಾಣುವಂತಾಗಬೇಕು.

ಯಡಿಯೂರಪ್ಪ 4ನೇ ಬಾರಿ ಸಿಎಂ ಆದ ನಂತರ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆದಿವೆ. ಉಪಚುನಾವಣೆ ನಡೆಯಿತು. ಇದರಿಂದಾಗಿ ಆಡಳಿತ ಯಂತ್ರಕ್ಕೆ ನಿರೀಕ್ಷಿತ ಮಟ್ಟದಲ್ಲಿ ಚುರುಕು ಮುಟ್ಟಿಸಲು ಸಾಧ್ಯವಾಗಿಲ್ಲ.

ಸರ್ಕಾರ ಉಳಿಯುವುದೋ, ಉರುಳುವುದೋ ಎಂಬ ಭಾವನೆಯಲ್ಲಿಯೇ ಅಧಿಕಾರಿಗಳು ಶಕ್ತಿ ಕೇಂದ್ರದ ಕಡೆ ಬರುತ್ತಿರಲಿಲ್ಲ. ಇದೀಗ ಆಡಳಿತ ಯಂತ್ರವನ್ನು ಸಂಪೂರ್ಣ ಸಜ್ಜುಗೊಳಿಸಬೇಕಾಗಿದೆ. ಜತೆಗೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕಡೆ ಮುಟ್ಟಿಸಿ, ವಿಶ್ವಾಸಕ್ಕೆ ತೆಗೆದುಕೊಳ್ಳುವ ಕಡೆ ಆ ಪ್ರಯತ್ನ ಮಾಡುವತ್ತ ಗಮನ ಕೇಂದ್ರೀಕರಿಸಬೇಕಾಗಿದೆ.

ಅಲ್ಲದೆ ವಿವಿಧ ಇಲಾಖೆಗಳಲ್ಲಿ ಲಕ್ಷಾಂತರ ಕಡತಗಳು ವಿಲೇವಾರಿಗೆ ಕಾದು ಕುಳಿತಿವೆ. ಅವುಗಳನ್ನು ಆದ್ಯತೆ ಮೇರೆಗೆ ವಿಲೇ ಮಾಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕಾಗಿದೆ.

ಸಚಿವರಿಗೂ ಚಾಟಿ: ಸಚಿವರು ವಿಧಾನಸೌಧಕ್ಕೆ ಅಪರೂಪದ ಅತಿಥಿಗಳಾಗಿದ್ದಾರೆ. ಸಚಿವರು ಬಂದು ಕೂತರೆ ಆಡಳಿತ ಯಂತ್ರ ತಾನೇತಾನಾಗಿ ಚುರುಕಾಗುತ್ತದೆ. ಈ ನಿಟ್ಟಿನಲ್ಲಿ ಸಚಿವರಿಗೆ ಚಾಟಿ ಬೀಸಬೇಕಾಗಿದೆ.

ಸಂಪುಟದಲ್ಲಿರುವ 17 ಸಚಿವರ ಪೈಕಿ 15 ಜನರ ಬಳಿ ಹೆಚ್ಚುವರಿ ಖಾತೆಗಳಿವೆ. ಈ ಸಚಿವರಲ್ಲಿ ಬಹುತೇಕರು ತಮಗೆ ವಹಿಸಿದ್ದ ಹೆಚ್ಚುವರಿ ಖಾತೆಗಳ ಕಡೆ ತಿರುಗಿಯೂ ನೋಡಿಲ್ಲ. ಅಂತಹ ಇಲಾಖೆಗಳಲ್ಲಿ ಕೆಲಸಗಳೆಲ್ಲ ನಿಂತು ಹೋಗಿವೆ. ಈಗ ಆ ಇಲಾಖೆಗಳಿಗೆ ಬರುವ ಹೊಸ ಸಚಿವರ ಮೂಲಕ ಹೊಸತನವನ್ನು ತರಬೇಕಾಗಿದೆ.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...