Tuesday, 11th December 2018  

Vijayavani

ಪಂಚರಾಜ್ಯಗಳ ಫಲಿತಾಂಶದಲ್ಲಿ ಕೈ ಆಟ-3 ರಾಜ್ಯಗಳಲ್ಲಿ ಅಧಿಕಾರದತ್ತ ಕಾಂಗ್ರೆಸ್​ - ವರ್ಕೌಟ್​ ಆಗದ ಮೋದಿ - ಅಮಿತ್ ಷಾ ಅಲೆ        ರಾಜಸ್ಥಾನದಲ್ಲಿ ಮ್ಯಾಜಿಕ್ ನಂಬರ್ ಸನಿಹ ಕಾಂಗ್ರೆಸ್-95 ಕ್ಷೇತ್ರದಲ್ಲಿ ಕಾಂಗ್ರೆಸ್, 80 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ        ಮಧ್ಯಪ್ರದೇಶದಲ್ಲಿ ಹಾವು ಏಣಿ ಆಟ - ಕೈ ಕಮಲ ಸಮಬಲದ ಹೋರಾಟ - ಸರ್ಕಾರ ರಚನೆಗೆ ಪಕ್ಷೇತರರೇ ನಿರ್ಣಾಯಕರು        ತೆಲಂಗಾಣದಲ್ಲಿ ನಡೆಯದ ಕೈ-ಕಮಲದ ಆಟ-ಶರವೇಗದಲ್ಲಿ ಮುನ್ನುಗಿದ ಕೆಸಿಆರ್​-ನೂತನ ಸಿಎಂ ಆಗಿ ನಾಳೆ ಪ್ರಮಾಣ ವಚನ        ಛತ್ತೀಸ್​ಗಢದಲ್ಲಿ ಅಧಿಕಾರದತ್ತ ಕಾಂಗ್ರೆಸ್ - ಆಡಳಿತಾರೂಢ ಬಿಜೆಪಿಗೆ ಭಾರಿ ಮುಖಭಂಗ        ಮಿಜೋರಾಂನಲ್ಲಿ ಕಾಂಗ್ರೆಸ್​​​ಗೆ ಭಾರಿ ಮುಖಭಂಗ - ಅಧಿಕಾರದ ಗದ್ದುಗೆ ಹಿಡಿದ ಎಂಎನ್​​​ಎಫ್​ - 25 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ       
Breaking News

ಯಡಿಯೂರಪ್ಪ ನಿಯಂತ್ರಿಸಲು ಹಳೇ ಕಡತಗಳಿಗೆ ಮರುಜೀವ?

Thursday, 09.08.2018, 3:03 AM       No Comments

ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ಜನಮಾನಸದಲ್ಲಿ ಒಳ್ಳೆಯ ಭಾವನೆ ಮೂಡದಂತೆ ಪ್ರತಿಪಕ್ಷ ಬಿಜೆಪಿ ತಂತ್ರ ಮಾಡಿದೆ ಎಂಬ ಅಭಿಪ್ರಾಯದಲ್ಲಿರುವ ಜೆಡಿಎಸ್ ನಾಯಕರು, ಆ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಇತರೆ ನಾಯಕರ ಹಳೇ ಪ್ರಕರಣ ಮತ್ತು ಕಡತಗಳ ಧೂಳು ಕೊಡವುವ ಬಗ್ಗೆ ಚರ್ಚೆ ನಡೆಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ಒಂದೆಡೆ ಸಿಎಂ ಹಾಗೂ ಅವರ ತಂದೆ ಬಗ್ಗೆ ಯಡಿಯೂರಪ್ಪ ನಡೆಸಿದ ವೈಯಕ್ತಿಕ ದಾಳಿ, ಸಾಲಮನ್ನಾದಂಥ ಪ್ರಮುಖ ನಿರ್ಧಾರ ಕೈಗೊಂಡರೂ ಅನುಷ್ಠಾನಕ್ಕೆ ಕಾಲಾವಕಾಶ ನೀಡದೇ ಗೊಂದಲ ಸೃಷ್ಟಿಸಿದ್ದು ಜೆಡಿಎಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ.

ಎಚ್.ಡಿ. ರೇವಣ್ಣ ಬೇರೆ ಇಲಾಖೆಯಲ್ಲಿನ ಹಸ್ತಕ್ಷೇಪ ಮತ್ತು ವರ್ಗಾವಣೆ ವಿಚಾರದಲ್ಲಿ ಬಿಜೆಪಿ ನಾಯಕರು ಮಾತಿನ ದಾಳಿ ನಡೆಸುತ್ತಿರುವುದು ದಳಪತಿಗಳಿಗೆ ನುಂಗಲಾರದ ತುತ್ತಾಗಿದೆ.

ಈ ಕಾರಣಕ್ಕೆ ಬಿಜೆಪಿ ನಾಯಕರ ಹೆಡೆಮುರಿಕಟ್ಟಲು ತಂತ್ರವೊಂದನ್ನು ಹೆಣೆಯಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿದ್ದು, ಬಿಜೆಪಿ ಸರ್ಕಾರದ ಅವಧಿಯಲ್ಲಿನ ವಿವಾದಾತ್ಮಕ ತೀರ್ವನಗಳು ಹಾಗೂ ನ್ಯಾಯಾಲಯದ ಮೆಟ್ಟಿಲೇರಿದ್ದ ಪ್ರಕರಣಗಳ ವಸ್ತುಸ್ಥಿತಿಯನ್ನು ಅರಿಯುವ ಕುರಿತು ಚರ್ಚೆಗಳು ನಡೆದಿವೆ ಎನ್ನಲಾಗಿದೆ.

ಎಲ್ಲ ಸಮಸ್ಯೆಗಳಿಗೆ ಒಂದೇ ಬಾರಿ ಪರಿಹಾರ ಕಲ್ಪಿಸಲು ಸಿಎಂ ಕುಮಾರಸ್ವಾಮಿ ಮಂತ್ರವಾದಿಯಲ್ಲ. ಯಡಿಯೂರಪ್ಪ ಇದನ್ನರಿತು ಮಾತನಾಡಲಿ. ನಮ್ಮ ಬಳಿ ನೋಟು ಪ್ರಿಂಟ್ ಮಾಡುವ ಮಷಿನ್​ಗಳಿಲ್ಲ. ಬಿಎಸ್​ವೈ ಬಳಿ ಇರುವ ಮಷಿನ್ ಕೊಟ್ಟರೆ ಅನುಕೂಲವಾಗುತ್ತದೆ. ಅಧಿಕಾರಿಗಳ ವರ್ಗಾವಣೆ ಹಸ್ತಕ್ಷೇಪ ಬಗ್ಗೆ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ.

| ಎಚ್.ಡಿ.ರೇವಣ್ಣ ಲೋಕೋಪಯೋಗಿ ಸಚಿವ

Leave a Reply

Your email address will not be published. Required fields are marked *

Back To Top