ಯಲಬುರ್ಗಾ: ಅಕ್ಷರ ಕ್ರಾಂತಿ ಮೂಡಿಸಿದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಆದರ್ಶ ಎಲ್ಲರೂ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆರಿಬಸಪ್ಪ ನಿಡಗುಂದಿ ಹೇಳಿದರು.
ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ದೇಶದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶದ ಮೊದಲ ಶಿಕ್ಷಕಿಯಾಗಿ ಅಕ್ಷರದ ಅರಿವು ಮೂಡಿಸಿದ ಫುಲೆ ಅವರ ತತ್ವಾದರ್ಶ ಎಲ್ಲರಿಗೂ ಸ್ಫೂರ್ತಿದಾಯಕ. ಸ್ತ್ರೀ ಕುಲಕ್ಕೆ ಶಿಕ್ಷಣದ ಮೂಲಕ ರಹದಾರಿ ತೋರಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದ್ದಾರೆ ಎಂದರು.
ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಾ.ಶಿವನಗೌಡ ದಾನರಡ್ಡಿ, ವಕ್ತಾರ ಆನಂದ ಉಳ್ಳಾಗಡ್ಡಿ, ಜಿಪಂ ಮಾಜಿ ಸದಸ್ಯ ಈರಪ್ಪ ಕುಡಗುಂಟಿ, ಭೂನ್ಯಾಯ ಮಂಡಳಿ ಸದಸ್ಯ ಮಲ್ಲಿಕಾರ್ಜುನ ಜಕ್ಕಲಿ, ಪ್ರಮುಖರಾದ ಹಂಪಯ್ಯಸ್ವಾಮಿ ಹಿರೇಮಠ, ಶರಣಗೌಡ ಬಸಾಪುರ, ಸಿದ್ದು ಪಾಟೀಲ್, ನಾಗರಾಜ ತಲ್ಲೂರು, ನಿಂಗಪ್ಪ ಕಮತರ, ಸುರೇಶ ದಾನಕೈ, ಪುನೀತ್ ಕೊಪ್ಪಳ, ಸಂಗಮೇಶ ಚಿಕ್ಕಮ್ಯಾಗೇರಿ ಇತರರಿದ್ದರು.