ಪೊಲೀಸರ ಮೇಲೆ ಹಲ್ಲೆ ಮಾಡಿದ ಕಾಂಗ್ರೆಸ್ ಮಾಜಿ ಶಾಸಕನ ಪುತ್ರ ಅರೆಸ್ಟ್‌

mlason
Published on

ಕಾರವಾರ: ಕಾಂಗ್ರೆಸ್ ಮಾಜಿ ಶಾಸಕ ವಿ.ಎಸ್ ಪಾಟೀಲ್ ಅವರ ಪುತ್ರನನ್ನು ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಮುಂಡಗೋಡು ಪೊಲೀಸರು ಬಂಧಿಸಿದ್ದಾರೆ.

ಬಾಪುಗೌಡ ಪಾಟೀಲ್ ಬಂಧಿತ ಆರೋಪಿ. ಕುಡಿದ ಮತ್ತಿನಲ್ಲಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಮತ್ತು ಹಣದ ವಂಚನೆಯ ಪ್ರಕರಣದಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ವಿ.ಎಸ್ ಪಾಟೀಲ್ ಅವರ ಪುತ್ರನನ್ನು ಬಂಧಿಸಲಾಗಿದೆ.

ಎರಡು ಚೆಕ್ ಬೌನ್ಸ್ ಪ್ರಕರಣ ಸೇರಿ ಬಾಪು ಗೌಡ ಪಾಟೀಲ್ ವಿರುದ್ಧ ಸೆಕ್ಷನ್ 353, 141,143, 147, 323, 353, 504, 506,149 ಅಡಿ ಪ್ರಕರಣ ಸಹ ದಾಖಲಾಗಿತ್ತು.

2011ರಲ್ಲಿ ಮುಂಡಗೋಡ ಅರಣ್ಯ ಇಲಾಖೆಯ ಐಬಿಯಲ್ಲಿ ಕುಡಿದ ಮತ್ತಿನಲ್ಲಿ15 ಜನರ ಜೊತೆ ಸೇರಿ ಎಎಸ್‌ಐ ಬಾಲಕೃಷ್ಣ ಪಾಲೇಕರ್ ಮೇಲೆ ಹಲ್ಲೆ ನಡೆಸಿದ್ದರು. ನ್ಯಾಯಾಲಯಕ್ಕೆ ಹಾಜರಾಗದೇ ಕಳೆದ ಆರು ತಿಂಗಳಿಂದ ತಲೆಮರೆಸಿಕೊಂಡಿದ್ದ ಬಾಪುಗೌಡ ಪಾಟೀಲ್‌ನನ್ನು ಪೊಲೀಸರು ಶನಿವಾರ ಬಂಧಿಸಿ ಇಂದು ಮುಂಜಾನೆ ಮುಂಡಗೋಡಿನಲ್ಲಿ ನ್ಯಾಯಾಧೀಶರ ಮುಂದೆ ಹಾಜುರುಪಡಿಸಿದ್ದರು.

ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಆರೋಪಿಯನ್ನು ಶಿರಸಿ ಜೈಲಿಗೆ ಕಳುಹಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net