ಯಲ್ಲಾಪುರ: ತಾಲೂಕಿನ ಮಂಚಿಕೇರಿಯಲ್ಲಿ ಡಿ. 23ರಂದು ನಡೆಯಲಿರುವ ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಶಾಸಕ ಶಿವರಾಮ ಹೆಬ್ಬಾರ ಅವರು ತಹಸೀಲ್ದಾರ್ ಕಚೇರಿಯಲ್ಲಿ ಗುರುವಾರ ಬಿಡುಗಡೆಗೊಳಿಸಿದರು.
ಕಸಾಪ ತಾಲೂಕಾಧ್ಯಕ್ಷ ಸುಬ್ರಹ್ಮಣ್ಯ ಭಟ್ಟ, ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಮಾರ್ಗದರ್ಶಿ ಸಮಿತಿ ಸದಸ್ಯ ವೇಣುಗೋಪಾಲ ಮದ್ಗುಣಿ, ತಾಲೂಕು ಗೌರವ ಕಾರ್ಯದರ್ಶಿಗಳಾದ ಸಂಜೀವಕುಮಾರ ಹೊಸ್ಕೇರಿ, ಜಿ.ಎನ್. ಭಟ್ಟ ತಟ್ಟಿಗದ್ದೆ, ಪ್ರಮುಖರಾದ ಶ್ರೀರಂಗ ಕಟ್ಟಿ, ಟಿ.ವಿ. ಕೋಮಾರ, ಡಿ.ಎನ್. ಗಾಂವಕರ, ಶ್ರೀನಿವಾಸ ಗಾಂವ್ಕರ, ಕೃಷ್ಣ ಭಟ್ಟ ನಾಯಕನಕೆರೆ, ಸುಧೀರ ಕೋಡಕಣಿ ಇತರರಿದ್ದರು.