More

    ಆರು ಜಿಲ್ಲೆಗಳಿಗೆ ನಾಳೆ ಯೆಲ್ಲೋ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ ಮಾಹಿತಿ

    ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನ ವ್ಯಾಪಕವಾಗಿ ಮಳೆ ಸುರಿಯಲಿದೆ.

    ಹಾಸನ ಸೇರಿ ರಾಜ್ಯದ ಹಲವೆಡೆ ಗುರುವಾರ ಬಿರುಸಾಗಿ ಮಳೆಯಾಗಿದ್ದು, ಸಲು ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ. ದಕ್ಷಿಣ ಕನ್ನಡದಲ್ಲಿ ಜ.5,6ರಂದು, ಉಡುಪಿ, ಚಿಕ್ಕಮಗಳೂರು, ಹಾಸನ, ಮಂಡ್ಯ,ಮೈಸೂರಿನಲ್ಲಿ ಜ.5ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ.ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಶಿವಮೊಗ್ಗ,ತುಮಕೂರು, ವಿಜಯನಗರ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿಯಲ್ಲಿ ಮುಂದಿನ ಐದು ದಿನ ಹಗುರದಿಂದ ಕೂಡಿದ ಸಾಧಾರಣ ಮಳೆ ಸುರಿಯಲಿದೆ.

    ನೀವು ರಸ್ತೆ ಬದಿ ಚಹಾ ಕುಡಿಯುತ್ತಿದ್ದೀರಾ? ಹಾಗಿದ್ರೆ ಈ ಭಯಂಕರ ರೋಗದ ಅಪಾಯ ಕಟ್ಟಿಟ್ಟ ಬುತ್ತಿ..!
    ಮೋಡ ಕವಿದ ವಾತಾವರಣ:ರಾಜ್ಯಾದ್ಯಂತ ಮುಂದಿನ 4 ದಿನ ಮೋಡ ಕವಿದ ವಾತಾವರಣ ಇರಲಿದೆ. ಇದರಿಂದಾಗಿ ಕನಿಷ್ಠ ಮತ್ತು ಗರಿಷ್ಠ ತಾಪಮಾನದಲ್ಲಿ ತುಸು ಉಷ್ಣಾಂಶ ಕುಸಿತವಾಗಿ ಥಂಡಿ ಅನುಭವವಾಗಲಿದೆ. ಪಂಜಾಬ್, ಹರಿಯಾಣ,ದೆಹಲಿ, ಉತ್ತರ ಪ್ರದೇಶ ಹಾಗೂ ರಾಜಸ್ಥಾನದಲ್ಲಿ ತೀವ್ರವಾಗಿ ಶೀತ ಬಾಧಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಎಚ್ಚರಿಕೆ ಕೊಟ್ಟಿದೆ. ಒಂದು ವೇಳೆ ಉತ್ತರದಿಂದ ದಕ್ಷಿಣದತ್ತ ಗಾಳಿ ಬೀಸಿದರೆ ಕರ್ನಾಟಕದಲ್ಲಿಯೂ ಶೀತ ಪ್ರಮಾಣ ತುಸು ಹೆಚ್ಚಾಗಲಿದೆ. ಜತೆಗೆ, ಮುಂಜಾನೆ ಮಂಜು ಕವಿದ ವಾತಾವರಣವೂ ಇರಲಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts