More

    ಮುಂದಿನ ಮೂರು ದಿನ ಭಾರೀ ಮಳೆ; ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ

    ಬೆಂಗಳೂರು: ಮುಂದಿನ ಮೂರು ದಿನಗಳ ಕಾಲ ಬೆಂಗಳೂರು ನಗರದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

    ಮುಂದಿನ ಮೂರು ದಿನಗಳ ಕಾಲ ನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ತಗ್ಗುಪ್ರದೇಶದಲ್ಲಿ ವಾಸಿಸುವವರು ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ.

    ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯ ವಿವಿಧೆಡೆ ಧಾಕಾಕಾರ ಮಳೆ; ಜನಜೀವನ ಅಸ್ತವ್ಯಸ್ತ

     ನಗರದಲ್ಲಿ ಸುರಿದ ಮಳೆಯಿಂದ ಹಲವೆಡೆ ಅವಾಂತರ ಸೃಷ್ಟಿಯಾಗಿತ್ತು. ಧಾರಾಕಾರ ಮಳೆಯಿಂದ ನಗರದಲ್ಲಿ ನಾಲ್ಕು ಮರಗಳು ಧರೆಗೆ ಉರುಳಿವೆ. ಬೆಂಗಳೂರು ಪೂರ್ವ ವಲಯ-1, ಮಹದೇವಪುರ ವಲಯ-1, ಬೆಂಗಳೂರು ದಕ್ಷಿಣ ವಲಯದಲ್ಲಿ  2 ಮರಗಳು ಧರೆಗುರುಳಿವೆ.

    ರಾಜ್ಯದಲ್ಲಿ ಮುಂಗಾರು ಕೈಕೊಟ್ಟಿದ್ದು, ಹಿಂಗಾರು ಕೈ ಹಿಡಿಯುವ ಆಶಾಭಾವನೆ ಮೂಡಿದೆ. ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಸೃಷ್ಟಿಯಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಮಳೆಯಾಗಿದೆ. ಬೆಂಗಳೂರಿನಲ್ಲಿ ನಿನ್ನೆ (ನ.06) ಸಂಜೆ ಸುರಿದ ಮಳೆಯಿಂದ ಅವಾಂತರ ಸೃಷ್ಟಿಯಾಗಿತ್ತು. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿತ್ತು. ಅಂಡರ್​ಪಾಸ್​ಗಳಲ್ಲಿ ನೀರು ನಿಂತು ಪ್ರಯಾಣಿಕರು ಪರದಾಡುವಂತಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts