ನಾಳೆ 19 ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್, 48 ಗಂಟೆ ಭಾರಿ ಮಳೆ

rain
Published on

ಬೆಂಗಳೂರು: ಮಧ್ಯ ಮಹಾರಾಷ್ಟ್ರದಿಂದ ತಮಿಳುನಾಡುವರೆಗೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ 48 ಗಂಟೆ ಭಾರಿ ಮಳೆಯಾಗಲಿದೆ. ಬುಧವಾರವೂ ಬೆಂಗಳೂರು ಸೇರಿ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಮಳೆಯಾಗಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮುಂದಿನ 48 ತಾಸು ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಏ.15ರಂದು ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ಬೆಂಗಳೂರು, ಬೆಂ. ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರಿನಲ್ಲಿ ಏ.15, 16ರಂದು ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net