More

    ನಾಳೆ-ನಾಡಿದ್ದು ಕರಾವಳಿಯಲ್ಲಿ ಆರೆಂಜ್ ಅಲರ್ಟ್; ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ?

    ಬೆಂಗಳೂರು: ರಾಜ್ಯದಲ್ಲಿ ಹಲವೆಡೆ ಮಳೆ ಮುಂದುವರಿದಿದ್ದು, ಭಾರಿ ಮಳೆ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ನಾಳೆ-ನಾಡಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಉತ್ತರ ಕನ್ನಡದ ಕಾರವಾರ 160 ಮಿಮೀ, ಕುಮಟಾ ಮತ್ತು ಶಿರಾಲಿ ತಲಾ 130 ಮಿಮೀ, ಮಂಕಿ 110 ಮಿಮೀ, ಹೊನ್ನಾವರ 100 ಮಿಮೀ ಹಾಗೂ ಅಂಕೋಲಾ 90 ಮಿಮೀ ಮಳೆ ಸುರಿದಿದ್ದು, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ 48 ಗಂಟೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

    ಜೂ. 25, 26ರಂದು ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಹಾವೇರಿ ಮತ್ತು ಧಾರವಾಡದಲ್ಲಿ ಜೂ 24, 25 ರಂದು ಯೆಲ್ಲೋ ಅಲರ್ಟ್ ಇರಲಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ 72 ಗಂಟೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

    ಒಂದು ವಾರದಲ್ಲಿ ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾದರೆ, ಉತ್ತರ ಒಳನಾಡಿನಲ್ಲಿ ವಾಡಿಕೆಯಷ್ಟೇ ಮಳೆ ಬಿದ್ದಿದೆ. ಆದರೆ, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಶೇ.50 ಮಳೆ ಕೊರತೆಯಾಗಿದೆ. ಅಲ್ಲದೆ ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಮುಂದಿನ 5 ದಿನ ಮುಂದುವರಿಯಲಿದ್ದು, ಬುಧವಾರವೂ ಹಲವು ಜಿಲ್ಲೆಗಳಲ್ಲಿ ಅಬ್ಬರದ ಮಳೆಯಾಗಿದೆ.

    ವಿಶ್ವಪರ್ಯಟನೆಯಲ್ಲಿ ಗಗನಸುಖಿ: ನಮಸ್ಕಾರ ದೇವರು.. ಇದು ಡಾಕ್ಟರ್ ಬ್ರೋ..!

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts