More

    ಮೂಸಂಬಿ ಹಣ್ಣು ಮೆದುಳಿಗೆ ಆಮ್ಲಜನಕ ಪೂರೈಸುತ್ತೆದೆ, ಇದರ ಸೇವನೆಯಿಂದಾಗುವ ಲಾಭ ಸಾಕಷ್ಟು..!

    ಕೆಲ ಹಣ್ಣು-ಹಂಪಲುಗಳನ್ನು ಸೇವಿಸುವ ಮೂಲಕ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಇಂತಹ ಹಣ್ಣುಗಳಲ್ಲಿ ಮೂಸಂಬಿ ಕೂಡ ಒಂದು. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್ ಹೇರಳವಾಗಿ ಕಂಡುಬರುತ್ತವೆ. ಹಾಗೆಯೇ ಫೈಬರ್ ಅಂಶ ಕೂಡ ಇದರಲ್ಲಿದೆ. ಈ ಹಣ್ಣಿನ ರಸವನ್ನು ಕುಡಿಯುವುದರಿಂದ ಅಥವಾ ಈ ಹಣ್ಣನ್ನು ತಿನ್ನುವುದರಿಂದ ಹಲವು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.
    ಮೂಸಂಬಿ ರಸ ಜೀರ್ಣಕಾರಿ ಚಟುವಟಿಕೆಗೆ ತುಂಬಾ ಪ್ರಯೋಜನಕಾರಿ. ಇದರಲ್ಲಿರುವ ಆಮ್ಲ ಅಂಶವು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಹಾಗೆಯೇ ಹೊಟ್ಟೆಯ ಅನೇಕ ಸಮಸ್ಯೆಗಳನ್ನು ನಿವಾರಿಸುತ್ತದೆ.

    ಮೂಸಂಬಿ ರಸವನ್ನು ಕುಡಿಯುವುದರಿಂದ, ರಕ್ತ ಪರಿಚಲನೆ ಸರಿಯಾಗಿ ನಡೆಯುತ್ತದೆ. ಹಾಗೆಯೇ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಪ್ರತಿನಿತ್ಯ ಮೂಸಂಬಿ ರಸವನ್ನು ಕುಡಿಯುವುದರಿಂದ ದೇಹಕ್ಕೆ ರೋಗಗಳ ವಿರುದ್ಧ ಹೋರಾಡುವ ಶಕ್ತಿಯನ್ನು ನೀಡುತ್ತದೆ.

    ಈ ಹಣ್ಣು ರಕ್ತದ ಜೀವಕೋಶಗಳಲ್ಲಿ ಎಲೆಕ್ಟ್ರೋಲೈಟ್​ ಸಮತೋಲನ ಕಾಪಾಡಿಕೊಳ್ಳುವಲ್ಲಿ ಈ ಅಂಶಗಳು ಸಹಾಯಕವಾಗಿದೆ. ಈ ಹಣ್ಣಿನಲ್ಲಿರುವ ಪೊಟಾಶಿಯಂ ಮೆದುಳಿಗೆ ಆಮ್ಲಜನಕವನ್ನು ಪೂರೈಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.

    ಮೂಸಂಬಿ ಹಣ್ಣಿನಲ್ಲಿರುವ ವಿಟಮಿನ್ ಸಿ ಮತ್ತು ಎ ರಕ್ತದಲ್ಲಿರುವ ಬಿಳಿ ಜೀವಕೋಶಗಳನ್ನು ಉತ್ಪಾದಿಸಲು ಉತ್ತೇಜಿಸುತ್ತದೆ. ಇದರಿಂದ ದೇಹದ ಪ್ರತಿರಕ್ಷಣಾ ವ್ಯವಸ್ಥೆ ಸುಧಾರಿಸುತ್ತದೆ. ಹಾಗೆಯೇ ದೇಹದಲ್ಲಿ ಕಬ್ಬಿಣಾಂಶವನ್ನು ಹೆಚ್ಚಿಸಲು ಮೂಸಂಬಿ ಹಣ್ಣಿನ ಸೇವನೆ ಉತ್ತಮ. ಅಷ್ಟೇ ಅಲ್ಲದೆ ಶೀತ ಮತ್ತು ಕೆಮ್ಮಿಗೆ ಈ ಹಣ್ಣು ಅತ್ಯುತ್ತಮ ಪರಿಹಾರವಾಗಿದೆ.

    ಸ್ಕರ್ವಿ ಒಂದು ಕಾಯಿಲೆಯಾಗಿದ್ದು, ಈ ಸಮಸ್ಯೆ ಕಾಣಿಸಿಕೊಂಡರೆ ಒಸಡುಗಳಿಂದ ರಕ್ತಸ್ರಾವವಾಗುತ್ತವೆ. ಈ ರೋಗವು ವಿಟಮಿನ್ ಸಿ ಕೊರತೆಯಿಂದ ಉಂಟಾಗುತ್ತದೆ. ಮೂಸಂಬು ರಸದಲ್ಲಿ ಬಹಳಷ್ಟು ವಿಟಮಿನ್ ಸಿ ಇದ್ದು, ಇದು ಈ ಕಾಯಿಲೆಯನ್ನು ಹೋಗಲಾಡಿಸಲು ಸಹಕಾರಿಯಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts